ಮುಧೋಳ : ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಳು ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಕುರಿತು ಇತ್ತೀಚೆಗೆ ಮಾದ್ಯಮಗಳಲ್ಲಿ ಸರಣಿ ವರದಿಯಿಂದ ಎಚ್ಚತ್ತಿರುವ ಅಧಿಕಾರಿಗಳು ತಾಲೂಕಿನ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಒಂಟಗೋಡಿ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ತಹಸೀಲ್ದಾರ್ ಮಹಾದೇವ ಸಣಮುರಿ ನೇತೃತ್ವದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.