Two children drowned in the lake; Minister Santhosh Lad visited Yarinarayanpur village

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು.

ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ‌. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಸಹ ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.

ಜಿಲ್ಲಾಡಳಿತದಿಂದ ಕೆರೆಗೆ ತಡೆಗೋಡೆ ನಿರ್ಮಾಣ

ಯರಿನಾರಾಯಣಪುರ ಗ್ರಾಮದ ಕೆರೆಗೆ ಜಿಲ್ಲಾಡಳಿತದಿಂದ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಇಂತಹ ಅವಘಡಗಳನ್ನು ತಡೆಯಲಾಗುವುದಿಲ್ಲ. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಶಾಸಕರ ಅನುದಾನದಿಂದ ತಡೆಗೋಡೆ ನಿರ್ಮಾಣ ಮಾಡಬಹುದಾಗಿತ್ತು. ತಡೆಗೋಡೆ ನಿರ್ಮಾಣದಿಂದ ಸಮಸ್ಯೆಗಳು ಪರಿಹರಿಯುವುದಿಲ್ಲ. ಗ್ರಾಮಸ್ಥರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಅಂಗನವಾಡಿ ಕೇಂದ್ರ ಸ್ಥಳಾಂತರ

ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ‌ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ‌‌. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದರು.

ಕುಟುಂಬಸ್ಥರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಮನವಿ

ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಸ್ವತಃ ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂತೋಷ್‌ ಲಾಡ್ ಫೌಂಡೇಶನ್ ನಿಂದ ಧನ ಸಹಾಯ

ಸಂತೋಷ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರರಾದ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತಿತರರು ಉಪಸ್ಥಿತರಿದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ