ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಮುದ್ದೇಬಿಹಾಳ : ವಿವೇಕ ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ ಸದಾ ಇರುತ್ತದೆ ಎಂದು ಜ್ಞಾನ ಭಾರತಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು.

ಪಟ್ಟಣದ ಸಂಗಮೇಶ್ವರ ನಗರದ ರೇವಣಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಆಯೋಜಿಸಿರುವ ರಾಷ್ಟೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿವೇಕಾನಂದರು ಯುವ ಜನತೆಗೆ ಸದಾ ಅನುಕರಣೀಯರಾಗಿದ್ದಾರೆ. ಸಮಯದ ಸದುಪಯೋಗ, ವಿವೇಕಪ್ರಜ್ಞೆ, ಸಂಸ್ಕಾರ ಇವೆಲ್ಲವೂ ರಕ್ತಗತವಾಗಬೇಕಾಗಿದೆ. ವಿಕಸಿತ ಭಾರತವಾಗಬೇಕಾದಲ್ಲಿ ಮಾನವ ಸಂಪನ್ಮೂಲದ ಸದ್ಬಳಕೆ ತೀರಾ ಅವಶ್ಯಕ ಎಂದು ಹೇಳಿದರು.

ಮುಖ್ಯಗುರು ಎಚ್.ಎನ್.ಇಟಗಿ ಮಾತನಾಡಿ, ಬದುಕಿನ ಸಮಸ್ಯೆಗಳಿಗೆ ಆಧ್ಯಾತ್ಮದಲ್ಲಿ ಪರಿಹಾರವಿದೆ. ವಿವೇಕಾನಂದರ ಬದುಕಿನಲ್ಲಿ ಅವರ ತಾಯಿಯ ಆಧ್ಯಾತ್ಮ ಪ್ರೇರಣೆ ಮತ್ತು ಸಂಸ್ಕಾರಗಳು ಪ್ರಧಾನ ಪಾತ್ರವಹಿಸಿದೆ. ನಾವು ಉತ್ತಮಾಂಶಗಳನ್ನು ಕಷ್ಟಪಟ್ಟಾದರು ರೂಢಿಸಿಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು.

ಶಿಕ್ಷಕರಾದ ಎಸ್.ಬಿ.ರಾಂಪೂರ, ಬಿ.ಜಿ. ತಾಳಿಕೋಟೆ, ವಾಯ್.ಎಚ್.ಹಳೆಮನಿ, ಎಸ್.ಎಚ್.ಚಿತ್ತರಗಿ ಸೇರಿದಂತೆ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪೋಟೊ: ಪಟ್ಟಣದ ಸಂಗಮೇಶ್ವರ ನಗರದ ರೇವಣ ಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ರಾಷ್ಟೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.

Latest News

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ ತಾಲ್ಲೂಕು ಇನ್ನೂವರೆಗೂ ಘೋಷಣೆಯಾಗಿಲ್ಲ.ಎರಡು ದಿನಗಳ ಕಾಲ ಮಣ್ಣಿನ ತೇವಾಂಶ,ಬೆಳೆಯ ಗುಣಮಟ್ಟ,ವಾತಾವರಣದಲ್ಲಿ ತೇವಾಂಶ ಎಷ್ಟಿದೆ ಎಂದು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕು.ಈಗ ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದಾರೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ದಿನವೂ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಸರ್ಕಾರಕ್ಕೆ,ಸಿಎಂ,ಕoದಾಯ ಮಂತ್ರಿ ಹಾಗೂ ಶಾಸಕ ಸಿ.ಎಸ್.ನಾಡಗೌಡರಿಗೆ ಜಯಘೋಷಗಳನ್ನು ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ