Two children drowned in the lake; Minister Santhosh Lad visited Yarinarayanpur village

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು.

ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ‌. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಸಹ ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.

ಜಿಲ್ಲಾಡಳಿತದಿಂದ ಕೆರೆಗೆ ತಡೆಗೋಡೆ ನಿರ್ಮಾಣ

ಯರಿನಾರಾಯಣಪುರ ಗ್ರಾಮದ ಕೆರೆಗೆ ಜಿಲ್ಲಾಡಳಿತದಿಂದ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಇಂತಹ ಅವಘಡಗಳನ್ನು ತಡೆಯಲಾಗುವುದಿಲ್ಲ. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಶಾಸಕರ ಅನುದಾನದಿಂದ ತಡೆಗೋಡೆ ನಿರ್ಮಾಣ ಮಾಡಬಹುದಾಗಿತ್ತು. ತಡೆಗೋಡೆ ನಿರ್ಮಾಣದಿಂದ ಸಮಸ್ಯೆಗಳು ಪರಿಹರಿಯುವುದಿಲ್ಲ. ಗ್ರಾಮಸ್ಥರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಅಂಗನವಾಡಿ ಕೇಂದ್ರ ಸ್ಥಳಾಂತರ

ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ‌ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ‌‌. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದರು.

ಕುಟುಂಬಸ್ಥರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಮನವಿ

ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಸ್ವತಃ ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂತೋಷ್‌ ಲಾಡ್ ಫೌಂಡೇಶನ್ ನಿಂದ ಧನ ಸಹಾಯ

ಸಂತೋಷ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರರಾದ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತಿತರರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು