ಬೆಂಗಳೂರು, ಆಗಸ್ಟ್ 25: ಧಾರವಾಡ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಕೌಶಲ್ಯ ತರಬೇತಿ ಸಂಸ್ಥೆಗಳ ಕುರಿತು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಅತ್ಯಾಧುನಿಕ ತರಬೇತಿ ನೀಡಲು ಈ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ದಾಸರಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಕಾರ್ಖಾನೆಗಳು ಮತ್ತು ಬಾಯ್ಲರು ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಜಂಟಿ ಕಾರ್ಮಿಕ ಆಯುಕ್ತರಾದ ಚಿದಾನಂದ, ಜಂಟಿ ಕಾರ್ಯದರ್ಶಿಗಳಾದ ಉಮೇಶ್ ಮತ್ತು ಖಾಸಗಿ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.