Guruvandana Program: Life without Guru is darkness-Siddhalinga Sri

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುರುಗಳು ತಾಯಿ ಸಮಾನರು. ವಿದ್ಯಾರ್ಥಿ ಜೀವನ ಬದುಕಿನ ಬಂಗಾರದ ಲಕ್ಷಣಗಳು ಇದ್ದು ಯಾರಿಂದ ಮೇಲೆ ನಾವು ಏರಿದ್ದೇವು ಅದನ್ನು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕ ಎಸ್.ಬಿ.ಕನ್ನೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಶಿಕ್ಷಕ ವೃತ್ತಿ ನಿರ್ವಹಿಸಿದ್ದಕ್ಕೆ ನಮಗೆ ಹೆಮ್ಮೆ ಇದೆ.ನಮ್ಮ ಕೈಯ್ಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಲವರು ಸೇವೆಯಲ್ಲಿದ್ದಾರೆ. ಆದರೆ ದೊಡ್ಡ ಹುದ್ದೆಯಲ್ಲಿದ್ದರೂ ಮಾನವೀಯ ಗುಣಗಳನ್ನು ಬಿಟ್ಟಿಲ್ಲ. ಇಂದಿನವರು ಆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ದಾನ,ದಯೆ,ಮಾನವೀಯ ಗುಣಗಳನ್ನು ಪಾಲಿಸಬೇಕು ಎಂದರು.

ಬೆಂಗಳೂರಿನ ಚೌಧರಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಚೌಧರಿ ಮಾತನಾಡಿ, ಯುವ ಜನಾಂಗ ಶಿಕ್ಷಕರಿಗೆ ಗೌರವ ಕೊಡುವುದನ್ನು ಮರೆತಿದೆ.ಅದಕ್ಕೆ ಸಾಮಾಜಿಕ ಮಾಧ್ಯಮಗಳೂ ಕಾರಣ.ವಿದ್ಯಾರ್ಥಿಗಳಿಗೆ ತಪ್ಪು ಮಾಡಿದಾಗ ಶಿಕ್ಷಕರು ಕೊಡುವ ಶಿಕ್ಷೆಯನ್ನೇ ದೊಡ್ಡದನ್ನಾಗಿ ಬಿಂಬಿಸಲಾಗುತ್ತದೆ. ಗುರು ಹಿರಿಯರಿಗೆ, ಶಿಕ್ಷಕರಿಗೆ, ಹೆತ್ತವರಿಗೆ ಗೌರವ ಕೊಡುವ ಕಾರ್ಯ ಆಗಬೇಕು. ನಾನು ಓದಿದ ಅವಧಿಯಲ್ಲಿ ತಮಗೆ ಕಲಿಸಿದ ಶಿಕ್ಷಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಜಿ.ಆರ್.ನಾವದಗಿ,ಎ.ಎಸ್.ಬಳೂರಗಿ, ಎಸ್.ಎಲ್.ಗುರವ, ಕೆ.ಪಿ.ಹಿರೇಮಠ, ಎ.ಸಿ.ಹಿರೇಮಠ, ಬಿ.ಕೆ.ಪಾಟೀಲ್, ಪಾಂಡುರಂಗ ಕೊರ್ತಿ,ಅಂದಾನೆಪ್ಪ ಚಿನಿವಾರ, ಬಿ.ವಾಯ್.ದಾಸರ, ಬಸವರಾಜ ನಾಶಿ, ಎಚ್.ಎಂ.ನಾಟೀಕಾರ, ಬಿ.ಜಿ.ಸಜ್ಜನ, ಸಿ.ಎಂ.ಕಾರಜೋಳ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ ತೋರಿದ ಬಳಗದ ಸದಸ್ಯರಾದ ಸುಧೀರಸಿಂಗ ಬಿಜಾಪೂರ, ಸೋಮನಾಥ ಸೂಳಿಭಾವಿ, ಡಾ.ಗೌತಮ ಚೌಧರಿ,ವೆಂಕನಗೌಡ ಪಾಟೀಲ,ನಿಂಗಪ್ಪ ಚಟ್ಟೇರ,ಉಮೇಶ ಕಂಠಿ,ಬುರಾನ್ ರುದ್ರವಾಡಿ,ಮೋಹನ ಹಂಚಾಟೆ, ಸದಾನಂದ ಬುಡ್ಡರ ಮೊದಲಾದವರನ್ನು ಗೌರವಿಸಲಾಯಿತು.

ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು.ಬುರಾನಸಾಬ ರುದ್ರವಾಡಿ ಕಾರ್ಯಕ್ರಮ ನಿರ್ವಹಿಸಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ