ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್ ಮಾಡುವ ಮೂಲಕ ನಮ್ಮ ಬೇಡಿಕೆಯನ್ನು ಸಿ.ಎಂ ಡಿ.ಕೆ.ಶಿವಕುಮಾರ ಅವರಿಗೆ ಹಾಗೂ ಪಕ್ಷದ ಹೈಕಮಾಂಡ್ ಗಮನಕ್ಕೆ ತರಬೇಕಿದೆ.ಯಾವುದೇ ಬಲವಂತವಿಲ್ಲದೇ ನಮ್ಮ ವ್ಯಾಪಾರ ವಹಿವಾಟುಗಳನ್ನು ಒಂದು ದಿನದ ಮಟ್ಟಿಗೆ ಬಂದ್ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾಗಿ ಅವರು ಹೇಳಿದರು.

ಮುದ್ದೇಬಿಹಾಳ ಮತಕ್ಷೇತ್ರದಿಂದ ಸುಮಾರು 5000 ಜನರು ಪಟ್ಟಣಕ್ಕೆ ಆಗಮಿಸಲಿದ್ದು ಪಟ್ಟಣದ ಬನಶಂಕರಿ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಭವ್ಯ ಮೆರವಣಿಗೆ ಮೂಲಕ ತೆರಳಿ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ, ಸಿ.ಎಂ ಡಿ.ಕೆ.ಶಿವಕುಮಾರ, ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ ಅವರಿಗೆ ಫ್ಯಾಕ್ಸ್ ಮೂಲಕ ಮನವಿಯನ್ನು ಕಳುಹಿಸಿ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಾರನಾಳ ಹೇಳಿದರು.

ಮುದ್ದೇಬಿಹಾಳ ಪಟ್ಟಣದಿಂದ ಶುಕ್ರವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಯಾವುದೇ ಬಸ್ ಸಂಚಾರ ನಡೆಸದೇ ಸ್ಥಗಿತಗೊಳಿಸಬೇಕು ಎಂದು ಸಾರಿಗೆ ಇಲಾಖೆಯ ವ್ಯವಸ್ಥಾಪಕರಿಗೆ ಮನವಿಯನ್ನು ಮಾಡಲಾಗುತ್ತದೆ.ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು ಹೆಚ್ಚಿನ ಭದ್ರತೆ ನೀಡಬೇಕು ಎಂದು ಕೋರಿದ್ದೇವೆ.ಪ್ರತಿಭಟನೆರ‍್ಯಾಲಿ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ತಾರನಾಳ, ಇದು ಬಲವಂತದ ಬಂದ್ ಅಲ್ಲ.ವ್ಯಾಪಾರಸ್ಥರೇ ಸ್ವಯಂಪ್ರೇರಿತರಾಗಿ ಬಂದ್ ಮಾಡುತ್ತೇವೆ ಎಂದು ತಿಳಿಸಿದ್ದರಿಂದ ಪಕ್ಷಾತೀತವಾಗಿ ನಾವು ಈ ರ‍್ಯಾಲಿ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಬಾಪುರಾಯ ದೇಸಾಯಿ,ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ,ಪುರಸಭೆ ಮಾಜಿ ಅಧ್ಯಕ್ಷ ಮೆಹಬೂಬ ಗೊಳಸಂಗಿ, ಮಾಜಿ ಸದಸ್ಯರಾದ ಶಿವು ಶಿವಪೂರ, ರಫೀಕ ದ್ರಾಕ್ಷಿ, ಕಾಮರಾಜ ಬಿರಾದಾರ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಹೆಸ್ಕಾಂ ಗ್ರಾಹಕರ ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ, ಹುಸೇನ ಮುಲ್ಲಾ, ಸುರೇಶಗೌಡ ಪಾಟೀಲ ಇಂಗಳಗೇರಿ,ಬಾಪುಗೌಡ ಪೀರಾಪೂರ,ಸಂಗನಗೌಡ ಪಾಟೀಲ,ಹರೀಶ ಬೇವೂರ,ರಾಜು ರಾಯಗೊಂಡ,ಸAಗಣ್ಣ ಮೇಲಿನಮನಿ ಇದ್ದರು.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ