ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18:

ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.

ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದರು.

ಈ ವೇಳೆ ಸ್ವತಃ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ಅಧಿವೇಶನದ ಸಂದರ್ಭದಲ್ಲಿ ಸದನದ ಸದಸ್ಯರ ಬಗ್ಗೆ ಯಾವುದೇ ವ್ಯಯಕ್ತಿಕ ವಿಚಾರ ಪ್ರಸ್ತಾಪ ಮಾಡಬೇಕಿದ್ದರೆ ಅದಕ್ಕೊಂದು ನಿಯಮಾವಳಿ ಇದೆ. ಕನಿಷ್ಟ ವಾರಕ್ಕೂ ಮುಂಚೆಯೇ ಸದಸ್ಯರಿಗೆ ನೋಟೀಸ್ ನೀಡಬೇಕು. ಆದರೆ, ಈ ವಿಚಾರದಲ್ಲಿ ದಿಢೀರನೆ ಆರೋಪ ಮಾಡಿ ಚರ್ಚೆಗೆ ಅವಕಾಶ ಕೇಳುತ್ತಿದ್ದಾರೆ. ಆದರೂ ನಾನು ಸದನದ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಮೇಲಿನ ಆರೋಪದ ಬಗ್ಗೆ ಸದನದಲ್ಲಿ ಚರ್ಚಿಸಲು ಹಾಗೂ ಉತ್ತರ ನೀಡಲು ನನ್ನದೇನೂ ಅಭ್ಯಂತರ ಇಲ್ಲ. ಈ ವಿಚಾರ ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟದ್ದು” ಎಂದರು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಇನ್ನೂ ಸಾಕಷ್ಟು ವಿಧೇಯಕಗಳು ಮಂಡನೆಗೆ ಬಾಕಿ ಇದ್ದು, ತದನಂತರ ಈ ವಿಚಾರವನ್ನು ಚರ್ಚಿಸಲು ಅವಕಾಶ ನೀಡುವುದಾಗಿ ತಿಳಿಸಿದರು.

Latest News

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಬೆಳಗಾವಿ(ಸುವರ್ಣ ವಿಧಾನಸೌಧ ): ಕಾರ್ಯನಿರತ ಪತ್ರಕರ್ತರ ಸಂಘಟನೆಯವರು ಮುಂದಿರಿಸಿರುವ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು

TP, ZP Election: ತಾಪಂ, ಜಿಪಂ ಚುನಾವಣೆಗೆ ಮೂಹುರ್ತ ನಿಗದಿ

TP, ZP Election: ತಾಪಂ, ಜಿಪಂ ಚುನಾವಣೆಗೆ ಮೂಹುರ್ತ ನಿಗದಿ

ಬೆಂಗಳೂರು: ​ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಪ್ರಸ್ತುತ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದ್ದು, ಅದರ ಚುನಾವಣಾ ಭರವಸೆಯಾದ 'ಐದು ಗ್ಯಾರಂಟಿ' ಯೋಜನೆಗಳ ಅನುಷ್ಠಾನವು ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ​ಆಡಳಿತದ ಪ್ರಮುಖ ಕೇಂದ್ರ: ಐದು ಗ್ಯಾರಂಟಿಗಳು ​'ಶಕ್ತಿ' (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ), 'ಗೃಹ ಲಕ್ಷ್ಮಿ' (ಮಹಿಳಾ ಮುಖ್ಯಸ್ಥರಿಗೆ ಮಾಸಿಕ