1.05 crore profit for Sharan Veereshwar Pattana Cooperative Bank.. 12% dividend declared

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..

ನಾಲತವಾಡ / ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರು ದೊಡ್ಡ ದೊಡ್ಡ ಪಟ್ಟಣಗಳಿಗೆ ತೆರಳಿ ತಮ್ಮ ಹಣಕಾಸು ಚಟುವಟಿಕೆಗಳನ್ನು ನಿರ್ವಹಿಸಿಕೊಳ್ಳಲು ಹೋಗುವ ತೊಂದರೆ ನಿವಾರಣೆಗೆ ನಾಲತವಾಡದಂತಹ ಸಣ್ಣ ಪಟ್ಟಣ ಪ್ರದೇಶದಲ್ಲಿ ರಾಷ್ಟ್ರಿಕೃತ ಬ್ಯಾಂಕ್‌ಗಳಿಗೆ ಸರಿಸಮಾನ ಎನ್ನುವ ಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಿ ಜನರಿಗೆ ಉತ್ತಮ ಸೇವೆ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ಶ್ರೀ ಶರಣ ವೀರೇಶ್ವರ ಪಟ್ಟಣದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾಂಕಿನ 28ನೇ ವಾರ್ಷಿಕ ಮಹಾಸಭೆ,ಸಾಧಕರಿಗೆ ಹಾಗೂ ಬ್ಯಾಂಕಿನ ಉತ್ತಮ ಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸನ್ 2023-24ನೇ ಸಾಲಿನಲ್ಲಿ ಸಾಲ ವಸೂಲಾತಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಬ್ಯಾಂಕು ವರ್ಷಾಂತ್ಯಕ್ಕೆ 1.05 ಕೋಟಿ ರೂ.ಲಾಭ ಗಳಿಸಿದೆ.ಬ್ಯಾಂಕಿನ ಗ್ರಾಹಕರಿಗೆ ಶೇ.12ರಷ್ಟು ಲಾಭಾಂಶ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಬ್ಯಾಂಕಿನ ನಿರ್ದೇಶಕ ಬಿ.ಟಿ.ತಿರುಮುಖೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಡಿ.ಆರ್.ಮಳಖೇಡ ವರದಿ ವಾಚಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅಂಗಡಿ, ನಿರ್ದೇಶಕರಾದ ಬಸಣ್ಣ ವಡಗೇರಿ, ನಂದಪ್ಪ ಗಂಗನಗೌಡರ, ಸಿದ್ರಾಮಪ್ಪ ಹಂಪನಗೌಡ್ರ, ಖಾಜಾಹುಸೇನ ಎತ್ತಿನಮನಿ, ಈಶ್ವರಪ್ಪ ಚಿನಿವಾಲರ, ಸುಭಾಷ ಡಿಗ್ಗಿ, ಉಮೇಶ ಇಲಕಲ್, ಬಾಲಪ್ಪ ಹಟ್ಟಿ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡರ, ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ, ಉಪ ಪ್ರಧಾನ ವ್ಯವಸ್ಥಾಪಕ ಅಶೋಕ ಹಡಲಗೇರಿ, ವ್ಯವಸ್ಥಾಪಕ ಶರಣು ಕರಡಿ, ಸಲಹಾ ಸಮಿತಿ ಸದಸ್ಯರು, ನಾಲತವಾಡ, ಮುದ್ದೇಬಿಹಾಳ, ಲಿಂಗಸುಗೂರು, ಹುಣಸಗಿ, ತಾಳಿಕೋಟಿ ಶಾಖೆಗಳ ಸದಸ್ಯರು ಇದ್ದರು.

ಇದನ್ನೂ ಓದಿ: ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ರಾಜು ಹಾದಿಮನಿ ನಿರೂಪಿಸಿದರು. ವಿ.ಎಸ್.ಮಳಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ವಾಣಿಜ್ಯೋದ್ಯಮ ವಾಣಿಜ್ಯ ರತ್ನ ಪ್ರಶಸ್ತಿ ಪಡೆದ ಮುದ್ದೇಬಿಹಾಳದ ಉದ್ಯಮಿ ಶರಣು ಸಜ್ಜನ ಅವರನ್ನು ಹಾಗೂ ಶೇರು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ