10 students selected for free education

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು ಶಿಕ್ಷಣ ಸಂಸ್ಥೆ ಕಟ್ಟಿದ್ದು ವಿದ್ಯಾರ್ಥಿಗಳ ಏಳ್ಗೆಗೆ ಹಗಲಿರಳು ನಮ್ಮ ಸಂಸ್ಥೆ ಶ್ರಮಿಸುತ್ತದೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಹಳೇಮನಿ ಮಾತನಾಡಿ, ತಾಲ್ಲೂಕಿನಲ್ಲಿ ಖ್ಯಾತಿ ಪಡೆದಿರುವ ನಾಗರಬೆಟ್ಟ, ಮುದ್ದೇಬಿಹಾಳದ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಈ ವರ್ಷದಿಂದ ಹುಲ್ಲೂರಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಹಾಗೂ ಉಚಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಎಂ.ಜಿ.ವಿ.ಸಿ ಬಿಎಡ್ ಕಾಲೇಜಿನ ಉಪನ್ಯಾಸಕ ಬಸವರಾಜ ಬೋಳಿಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಪಾಲಕರು ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಗುಣಾತ್ಮಕ ಕಲಿಕೆ ಸಾಧ್ಯವಾಗುತ್ತದೆ ಎಂದರು.

ವೇ.ಮಹಾಂತೇಶ ಹಿರೇಮಠ,ಮಹಾದೇವಪ್ಪ ಹಳ್ಳದ, ಮಲ್ಲಯ್ಯ ಹಿರೇಮಠ, ನೀಲಪ್ಪ ಹಳೇಮನಿ, ಪ್ರಕಾಶ ಮಂಕಣಿ, ಪ್ರಶಾಂತ ಕಾಳೆ, ವೀರೇಶ ಗುರುಮಠ, ಬಸನಗೌಡ ಪಾಟೀಲ್, ಧರ್ಮೇಶ ತುಮರಮಟ್ಟಿ, ಮಹಾಂತೇಶ ಮನಹಳ್ಳಿ, ಅಶೋಕ ಭಜಂತ್ರಿ, ಹಣಮಂತಗೌಡ ಪಾಟೀಲ, ಬೆಳ್ಳೆಪ್ಪ ಮೇಟಿ, ಮುಖ್ಯಶಿಕ್ಷಕಿ ರೇಖಾವತಿ ಎಂ.ಎಸ್. ಇದ್ದರು. ಜಿ.ಎಂ.ಪತ್ತಾರ ಪ್ರಾರ್ಥಿಸಿದರು.

4ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ನಾಗೇಶ ರಾಠೋಡ, ಲಕ್ಷ್ಮಿ ಪಾಟೀಲ, ಮಹೇಶ ಹಳಬರ, ಬಸವರಾಜ ಗುಡದಿನ್ನಿ, ಬಸನಗೌಡ ಬಿರಾದಾರ, 7ನೇ ತರಗತಿಯಲ್ಲಿ ಉಚಿತ ಶಿಕ್ಷಣಕ್ಕೆ ಸ್ಪೂರ್ತಿ ಮೆಣಸಿನಕಾಯಿ, ಅಮೋಘ ಮನಹಳ್ಳಿ, ಭಾವನಾ ಪಡಸಲಗಿ, ಸುಕನ್ಯಾ ಸಾತಿಹಾಳ, ಭಾಗ್ಯಶ್ರೀ ರಡ್ಡೇರ ಅವರು ಆಯ್ಕೆಯಾದರು.

4 ಮತ್ತು 7ನೆಯ ತರಗತಿಯ 10 ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಘೋಷಿಸಿದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ