ಮುದ್ದೇಬಿಹಾಳ : ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಶನಿವಾರದಿಂದ ಆರಂಭಗೊAಡಿದ್ದು ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಶಾಂತಿಯುತವಾಗಿ ಪರೀಕ್ಷೆಗಳು ಆರಂಭಗೊoಡಿವೆ.ಏತನ್ಮಧ್ಯೆ ಪ್ರಶ್ನೆ ಪತ್ರಿಕೆ ಲೀಕ್, ನಕಲು ಸಮಸ್ಯೆಗೆ ಪರಿಹಾರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುದ್ದೇಬಿಹಾಳ ಪಟ್ಟಣದ ನಾಲ್ಕು,ನಾಗರಬೆಟ್ಟದ ಎರಡು,ನಾಲತವಾಡದ ಒಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆದಿವೆ.ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ ದಾಖಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊoಡಿದ್ದ 375 ವಿದ್ಯಾರ್ಥಿಗಳ ಪೈಕಿ 375 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದಾಖಲೆ ಮಾಡಿದ್ದಾರೆ.
ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 1020 ವಿದ್ಯಾರ್ಥಿಗಳ ಪೈಕಿ 1016 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ ನಾಲತವಾಡದ ಶ್ರೀ ವೀರೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 147ರಲ್ಲಿ 133 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಸ್.ಎಸ್.ಶಿವಾಚಾರ್ಯ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 821ರಲ್ಲಿ 760 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಜ್ಞಾನಭಾರತಿ ವಿದ್ಯಾಮಂದಿರ ಪರೀಕ್ಷಾ ಕೇಂದ್ರದಲ್ಲಿ 542ರಲ್ಲಿ 531 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಸರಕಾರಿ ಪಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 395ರಲ್ಲಿ 360 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಎಂ.ಜಿ.ವಿ.ಸಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 431ರಲ್ಲಿ 402 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಎಲ್ಲ ಸೆಂಟರ್‌ಗಳಲ್ಲಿ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್ ವಹಿಸಿದ್ದರು.
ಮೂರು ಕಾಲೇಜಿನಲ್ಲಿ ಶೂನ್ಯ ದಾಖಲಾತಿ:
ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿಯ ಎಸ್.ಡಿ.ಆರ್ ಪದವಿ ಪೂರ್ವ ಕಾಲೇಜು, ಬಳಬಟ್ಟಿಯ ಬಿ.ಎಂ.ದಡ್ಡಿ ಪಿಯು ಕಾಲೇಜು,ಮುದ್ದೇಬಿಹಾಳದ ಎಸ್.ಡಿ.ಪಾಟೀಲ ಸ್ವತಂತ್ರö್ಯ ಪಿಯು ಕಾಲೇಜಿನಿಂದ ಒಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ನೋಂದಾಯಿಸಿಕೊAಡಿಲ್ಲ ಎಂಬುದು ಪಿಯು ಬೋರ್ಡ್ನ ಮಾಹಿತಿಯಲ್ಲಿ ಬಹಿರಂಗವಾಗಿದೆ.







