11 years of BJP government: Five kg of rice from central government - Pampannavara

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳೆಂಬ ಅಗ್ಗದ ಯೋಜನೆಗಳನ್ನು ಕೊಟ್ಟು ಜನರನ್ನು ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. 35 ವ್ಯಾಟ್ ಇದ್ದದ್ದು 75 ವ್ಯಾಟ್ ವಿದ್ಯುತ್‌ನ್ನು ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದರು.

ಮುಖಂಡ ಗಂಗಾಧರ ನಾಡಗೌಡ ಮಾತನಾಡಿ, ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಕಲು ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಮುಖಂಡರಾದ ಪ್ರಭು ಕಡಿ, ಕೆಂಚಪ್ಪ ಬಿರಾದಾರ, ಮಧುಸ್ವಾಮಿ, ಸಂಜೀವ ಬಾಗೇವಾಡಿ, ಗಿರೀಶ ಪಾಟೀಲ, ಸಿದ್ದು ಹಿರೇಮಠ, ಅಶೋಕ ರಾಠೋಡ, ನಾಗೇಶ ಕವಡಿಮಟ್ಟಿ, ಗೌರಮ್ಮ ಹುನಗುಂದ ಮೊದಲಾದವರು ಇದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ