
ಮುದ್ದೇಬಿಹಾಳ : ಉಚಿತವಾಗಿ ಕೊಡುವ ಯಾವುದರಲ್ಲೂ ಹೆಚ್ಚಿನ ಕಾಲದವರೆಗೆ ಮೌಲ್ಯ ಇರುವುದಿಲ್ಲ. ಈ ದೆಸೆಯಲ್ಲಿ ನಾವು ನಮ್ಮ ಸಂಸ್ಥೆಯಿಂದ ಯಾವುದನ್ನೂ ಉಚಿತವಾದ ಘೋಷಣೆ ಮಾಡುತ್ತಿಲ್ಲ ಎಂದು
ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಹಡಲಗೇರಿ ಸೀಮೆಯ ವ್ಯಾಪ್ತಿಯಲ್ಲಿ ಬರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನ ಮುಂದುವರೆದಿದೆ. ಮುಂದೊಂದು ದಿನ ತರಗತಿಗಳಲ್ಲಿ ಶಿಕ್ಷಕರಿಲ್ಲದೇ ಪಾಠಗಳನ್ನು ಮಾಡುವ ಪರಿಸ್ಥಿತಿ ಬರುತ್ತದೆ. ಆರ್ಟಿಫಿಷಿಯಲ್ ಇಂಟಿಲಿಜೆನ್ಸ್ ಅಂತಹ ತಂತ್ರಜ್ಞಾನದ ಮಟ್ಟಕ್ಕೆ ನಮ್ಮ ಮಕ್ಕಳನ್ನು ರೂಪಿಸುವ ಅಗತ್ಯತೆ ಇದೆ ಎಂದು ಹೇಳಿದರು.
ನಮ್ಮಲ್ಲಿ ಸಿಬಿಎಸ್‌ಇ ಸಿಲೆಬಸ್ ಮಾದರಿಯ ಶಿಕ್ಷಣ ನೀಡುತ್ತಿದ್ದು 4-8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಅವಾರ್ಡ್ ಎಕ್ಸಾಂ ನಡೆಸುತ್ತಿದ್ದೇವೆ ಎಂದು ತಿಳಿಸಿದರಲ್ಲದೇ ದೂರದ ಜಿಲ್ಲೆಗಳಿಗೆ ನಮ್ಮ ಭಾಗದ ಮಕ್ಕಳನ್ನು ಕಳಿಸದೇ ನಮ್ಮ ಭಾಗದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುವುದೊಂದೇ ನಮ್ಮ ಗುರಿಯಾಗಿದೆ ಎಂದು ಉತ್ತರಿಸಿದರು.
ಸಂಸ್ಥೆಯ ಆಡಳಿತ ಮಂಡಳಿ ವ್ಯವಸ್ಥಾಪಕ ಪ್ರಭುಗೌಡ ಬಿರಾದಾರ ಮಾತನಾಡಿ, ಏ.6 ರಂದು ಬೆಳಗ್ಗೆ 10ಕ್ಕೆ ಪರೀಕ್ಷೆ ನಡೆಯಲಿದ್ದು 4-8 ನೇ ತರಗತಿ ಪರೀಕ್ಷೆಗೆ ಹಾಜರಾಗಿ ಮೊದಲ 1-10ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ, 15-25 ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.15 ರಷ್ಟು, 25-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶೇ.10 ರಷ್ಟು , 40-60 ರಷ್ಟು ರಿಯಾಯಿತಿ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶೇ.5 ರಷ್ಟು ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಪ್ರತಿ ವರ್ಗಕ್ಕೆ ಹತ್ತು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.
ಶಾಲೆಯ ಪ್ರಾಚಾರ್ಯೆ ಸುಪರ್ಣಾ ದಾಸ್ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ಆಯಾಮದಲ್ಲೂ ಶಿಕ್ಷಣ ನೀಡಲಾಗುತ್ತಿದೆ. ದೈಹಿಕ, ಮನೋವಿಕಾಸ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಸಂಗೀತ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದರು. ಶಿಕ್ಷಕ ಮಿದುನ್ ಇದ್ದರು. ಪರೀಕ್ಷೆಗೆ ಹೆಸರು ನೋಂದಾಯಿಸಲು ಮೊ.9035054452ಗೆ ವಾಟ್ಸಪ್ ಮಾಡಬಹುದು. ಹೆಚ್ಚಿನ ವಿವರಗಳಿಗೆ ಮೊ.9035054453,9035054454 ಸಂಪರ್ಕಿಸಬಹುದಾಗಿದೆ.