ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ.

ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.
ಇಲ್ಲಿನ ಹೋರಾಟಗಾರರು ರಾಜ್ಯ ಸರ್ಕಾರ ಘೋಷಿಸಿದ ಬೆಂಬಲ ಬೆಲೆ 3300 ರೂ.ನೀಡುವಂತೆ ಒತ್ತಾಯಿಸಿ ಲಿಖಿತ ಆದೇಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರೆಸಿದ್ದರು.

ವಿಷಯ ತಿಳಿದ ಜಿಲ್ಲಾಡಳಿತ ತಕ್ಷಣ ಸರ್ಕಾರದ ಆದೇಶವನ್ನು ಕಾರ್ಖಾನೆಯವರ ಗಮನಕ್ಕೆ ತಂದು ರೈತರಿಗೆ ನ್ಯಾಯುತವಾಗಿ ಕೊಡಬೇಕಾದ ಬೆಲೆಯನ್ನು ನೀಡುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯವರು ತಕ್ಷಣ ಸರ್ಕಾರದ ನಿರ್ದೇಶನದಂತೆ ನೀಡಬೇಕಾದ ಕಬ್ಬಿನ ದರವನ್ನು ಪ್ರಕಟಿಸಿದರು.

ಹೋರಾಟಗಾರ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಬಾರದು.ನಾವು ಯಾವೊಬ್ಬ ರೈತರು ಕಾರ್ಖಾನೆಯ ವಿರೋಧಿಗಳಲ್ಲ.ನಮ್ಮ ಭಾಗದ ಕಬ್ಬು 11.50 ರಿಕವರಿ ಇದೆ.ಆದರೆ ಇಲ್ಲಿ ಕಡಿಮೆ ತೋರಿಸುವುದೇತಕ್ಕೆ ಎಂಬುದನ್ನು ಪ್ರಶ್ನಿಸಿದರು.ಇದಲ್ಲದೇ ರೈತರಿಗೆ ಕೊಡುವ ಟನ್‌ಕಬ್ಬು ಪೂರೈಕೆ ಮಾಡಿದ ರೈತನಿಗೆ ಕೊಡುವ 100 ಗೊಬ್ಬರವನ್ನು ಸ್ಥಗಿತಗೊಳಿಸಬೇಕು.ಸರ್ಕಾರದಿಂದ ಪ್ರತ್ಯೇಕವಾಗಿ ವ್ಹೇ ಬ್ರಿಡ್ಜ್ ಹಾಕಬೇಕು ಎಂದು ಆಗ್ರಹಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಸನ್ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬAಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ಹಾಗೂ ಮುಖ್ಯಮಂತ್ರಿಗಳ ಆದೇಶದಂತೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ಒಂದು ಬಾರಿ ಸರ್ಕಾರದಿಂದ 50 ರೂ. ಹಾಗೂ ಬಾಲಾಜಿ ಸಕ್ಕರೆ ಕಾರ್ಖಾನೆ 50 ರೂ.ನೀಡಬೇಕು ಎಂದು ಆದೇಶಿಸಿದೆ ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ,ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿರುವ ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರದಿಂದ ನಿರ್ಧರಿತವಾದ ಎಫ್.ಆರ್.ಪಿ ದರದಂತೆ ರೈತರ ಕಬ್ಬಿಗೆ ಬೆಲೆ ನೀಡಲಾಗುತ್ತಿದೆ.ಮುದ್ದೇಬಿಹಾಳ ತಾಲ್ಲೂಕಿನ ಬಾಲಾಜಿ ಸಕ್ಕರೆ ಕಾರ್ಖಾನೆಯ ರಿಕವರಿ 10.89 ಇದ್ದು ಸಾಗಾಣಿಕೆ,ಕಟಾವು ವೆಚ್ಚವನ್ನು ಒಳಗೊಂಡAತೆ 3771 ರೂ.ನೀಡಲಾಗುತ್ತಿದೆ.ಕಬ್ಬು ಕಟಾವು ಮತ್ತು ಸಾಗಾಣಿಕ ವೆಚ್ಚವನ್ನು ಹೊರತುಪಡಿಸಿ 3164 ರೂ. ಸರ್ಕಾರ ಹಾಗೂ ಕಾರ್ಖಾನೆ ಸೇರಿ 100 ರೂ. ಒಟ್ಟು 3264 ರೂ.ಟನ್ ಕಬ್ಬಿಗೆ ನೀಡಲಾಗುವುದು ಎಂದು ತಿಳಿಸಿದರು.

ಬಾಲಾಜಿ ಸಕ್ಕರೆ ಕಾರ್ಖಾನೆಯ ಡಿಜಿಎಂ ಜಿ.ಎಂ.ಬಿರಾದಾರ ಮಾತನಾಡಿ, ಇಲ್ಲಿನ ರೈತರ ಹೋರಾಟವನ್ನು ಗಮನದಲ್ಲಿರಿಸಿಕೊಂಡು ನಮ್ಮ ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರ ಸೂಚಿಸಿದ ದರವನ್ನು ರಿಕವರಿ ಆಧಾರದ ಮೇಲೆ ಕೊಡಲು ಸಿದ್ದವಿದೆ.ರೈತರ ಬೇಡಿಕೆಯಂತೆ ಕಾರ್ಖಾನೆಯಿಂದ ಗೊಬ್ಬರ ಕೊಡುವುದಿಲ್ಲ.ಸರ್ಕಾರದಿಂದ ಪ್ರತ್ಯೇಕ ತೂಕದ ಯಂತ್ರ ಅಳವಡಿಸುತ್ತಿದ್ದರೆ ಕಾರ್ಖಾನೆಯ ಅಭ್ಯಂತರ ಏನೂ ಇಲ್ಲ.ಆದರೆ ನಮ್ಮಲ್ಲಿ ಎಲ್ಲವೂ ಪಾರದರ್ಶಕತೆಯಿಂದ ಕೂಡಿದೆ.ರೈತ ಮುಖಂಡರು ಹಲವಾರು ಬಾರಿ ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

ಅಂತಿಮವಾಗಿ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಪಡೇಕನೂರದ ಸೋಮನಗೌಡ ಕೋಳೂರ ಮಾತನಾಡಿ, ಕಬ್ಬಿನ ರಿಕವರಿ ನಮ್ಮ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದು ರೈತ ಮುಖಂಡರು ಜಿಲ್ಲಾಡಳಿತ ರಚಿಸುವ ಸಮೀತಿಯಲ್ಲಿರುತ್ತೇವೆ.ಕಾಲಕಾಲಕ್ಕೆ ರಿಕವರಿ ಪರಿಶೀಲನೆ ನಡೆಸಲಾಗುತ್ತದೆ.ಈಗ ತಿಳಿಸಿದ ರಿಕವರಿಗಿಂತ ಹೆಚ್ಚಿನ ರಿಕವರಿ ಬಂದಲ್ಲಿ ಅದಕ್ಕೆ ಸೂಕ್ತ ಬೆಲೆಯನ್ನು ಕಾರ್ಖಾನೆಯವರು ಹಾಕಿಕೊಡಬೇಕು ಎಂದು ತಿಳಿಸಿದರು.

ಬಳಿಕ ಸರ್ಕಾರದಿಂದ ಬಂದಿದ್ದ ಆದೇಶ ಪ್ರತಿಯನ್ನು, ಕಾರ್ಖಾನೆಯಿಂದ ತಂದಿದ್ದ ಲಿಖಿತ ಆದೇಶ ಪ್ರತಿಯನ್ನು ಹೋರಾಟಗಾರರಿಗೆ ಅಧಿಕಾರಿಗಳು ಹಸ್ತಾಂತರಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು. ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ತಹಶೀಲ್ದಾರ್ ಕೀರ್ತಿ ಚಾಲಕ್, ಕಂದಾಯ ನಿರೀಕ್ಷಕ ಪವನ್ ತಳವಾರ,ಪಿಎಸ್‌ಐ ಸಂಜಯ ತಿಪರೆಡ್ಡಿ ,ರೈತ ಸಂಘಟನೆ ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಜಿಲ್ಲಾ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಯುವ ಮುಖಂಡರಾದ ಅಕ್ಷಯ ನಾಡಗೌಡ, ಶಿವು ಕನ್ನೊಳ್ಳಿ, ಶಿವನಗೌಡ ಬಿರಾದಾರ, ಹರೀಶ ಲಾಯದಗುಂದಿ,ಗುರುಲಿAಗಪ್ಪ ಹಂಡರಗಲ್,ನಾಲತವಾಡದ ಮುಖಂಡರಾದ ಎಂ.ಬಿ.ಅAಗಡಿ, ಶಶಿಧರ ಬಂಗಾರಿ,ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ,ಅಶೋಕ ರಾಠೋಡ,ಅನಿಲ ರಾಠೋಡ,ಸಂಜೀವ ಬಾಗೇವಾಡಿ,ಸಂಗಣ್ಣ ಬೀಸಲದಿನ್ನಿ, ಅಯ್ಯಪ್ಪ ಬಿದರಕುಂದಿ ಮೊದಲಾದವರು ಇದ್ದರು.

ವಿಜಯೋತ್ಸವ : ಕಬ್ಬಿಗೆ ಹೆಚ್ಚುವರಿಯಾಗಿ ಬೆಂಬಲ ಬೆಲೆ ದೊರೆತ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು,ಯುವ ಮುಖಂಡರು,ಬಿಜೆಪಿ,ಕಾAಗ್ರೆಸ್ ಕಾರ್ಯಕರ್ತರು,ರೈತಪರ,ದಲಿತಪರ ಸಂಘಟನೆಯ ಮುಖಂಡರು,ಟ್ರಾö್ಯಕ್ಟರ್ ಚಾಲಕರು,ಕಬ್ಬು ತಂದಿದ್ದ ಬೆಳೆಗಾರರು ಪಟಾಕಿ ಸಿಡಿಸಿ,ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.ಐದು ದಿನಗಳ ಕಾಲ ನಿರಂತರ ಅನ್ನಪ್ರಸಾದ ಮಾಡಿದ ದಾನಿಗಳನ್ನು ಇದೇ ವೇಳೆ ಸ್ಮರಿಸಲಾಯಿತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ