
ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ ಶರಣಪ್ಪ ಬಸಪ್ಪ ಜಮ್ಮನಕಟ್ಟಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂಪಾಯಿ ಪರಿಹಾರಧನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.

ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಮೃತ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರಧನ ನೀಡುವಂತೆ ಮನವಿ ಮಾಡಿದ್ದರು. ಮನವಿಯಂತೆ ಈಗ ಐದು ಲಕ್ಷ ರೂಪಾಯಿ ಪರಿಹಾರಧನವನ್ನು ಮಂಜೂರು ಮಾಡಿದ್ದಾರೆ.