500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು ನಿಮ್ಮನ್ನು ಆಳುತ್ತಾರೆ ಎಂಬುದನ್ನು ಮರೆಯಬೇಡಿ.ಒಳ್ಳೆಯವರನ್ನು ಚುನಾಯಿಸುವ ಅಧಿಕಾರ ಸಂವಿಧಾನ ನಿಮಗೆ ನೀಡಿದ್ದು ಅದನ್ನು ಸಮರ್ಥ ವ್ಯಕ್ತಿಯ ಆಯ್ಕೆಗೆ ಬಳಸಿಕೊಳ್ಳಿ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 246 ಮತಗಟ್ಟೆಗಳಿದ್ದು ಒಟ್ಟು 2,30,196 ಲಕ್ಷ ಮತದಾರರು ಅರ್ಹರಿದ್ದು 1,15,094 ಪುರುಷರು, 1,15,020, ಮಂಗಳಮುಖಿಯರು 32 ಜನ ಇದ್ದಾರೆ ಎಂದು ಮಾಹಿತಿ ನೀಡಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಮಾತನಾಡಿ, ಚುನಾವಣೆಗಳಲ್ಲಿ ಪ್ರಭಾವವನ್ನು ಬೀರುವ ಕೆಲಸವನ್ನು ರಾಜಕಾರಣಿಗಳು ಮತದಾರರಿಗೆ ಮಾಡುತ್ತಾರೆ.ಆದರೆ ಪ್ರಭಾವಕ್ಕೆ ಒಳಗಾಗದೇ ಪ್ರಾಮಾಣಿಕವಾಗಿ ಉತ್ತಮ ವ್ಯಕ್ತಿಗಳನ್ನು ಚುನಾಯಿಸುವ ಕೆಲಸ ಮತದಾರರು ಮಾಡಬೇಕು.ಚುನಾವಣೆಯಲ್ಲಿ ಲಂಚ ನೀಡುವುದು, ಪ್ರಭಾವ ಬೀರುವ ಅಪರಾಧಗಳಿಗೆ ಬಿಎನ್‌ಎಸ್ ಕಾಯ್ದೆಯಲ್ಲಿ ಶಿಕ್ಷೆ ವಿಧಿಸಬಹುದಾಗಿದೆ ಎಂದರು.

ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಮತದಾನ ಮಹತ್ವದ ಕುರಿತು ಉಪನ್ಯಾಸ ನೀಡಿದರು.ತಾಪಂ ಇಒ ವೆಂಕಟೇಶ ವಂದಾಲ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ, ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ, ನ್ಯಾಯಾಲಯದ ಸಿಬ್ಬಂದಿ ಅರವಿಂದ ಕುಂಬಾರ ಇದ್ದರು.ಎಸ್.ಜಿ.ಲೊಟಗೇರಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಉತ್ತಮ ಬಿಎಲ್‌ಒಗಳಾಗಿ ಸೇವೆ ಸಲ್ಲಿಸಿದ ಬಿ.ಎಂ.ಲಮಾಣಿ, ಸಿ.ಕೆ.ಪತ್ತಾರ, ಪರಶುರಾಮ ಮೇಟಿ,ಬಿ.ಆಯ್.ಗಣಿಹಾರ ಅವರನ್ನು ಸನ್ಮಾನಿಸಲಾಯಿತು.ಇದೇ ವೇಳೆ ಮತದಾರರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮತದಾನದ ಕುರಿತು ಅರಿವು ಮೂಡಿಸಿದ ಹಡಲಗೇರಿ ವಸತಿಯುಕ್ತ ಪದವಿ ಕಾಲೇಜಿನ ಉಪನ್ಯಾಸಕ ರವಿ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು.

Latest News

Uncrossable Rush van Evoplay

In de wereld van online gokkasten zijn er vaker slots te

Il Giochi Avvincente Di MyStake Chicken Gioco

MyStake Chicken Gioco è un gioco di slot creato da uno

Uciechy i Wycieczki przez ulicę Kurczaka od InOut

Kiedy przychodzi na myśl sloty z nietypowymi tematami, wielu graczy niezwłocznie

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿAದ ಜ.25ರಂದು ಶಹಾಪೂರದಲ್ಲಿ ಆಕ್ಸಫಡ ಪಾಟೀಲ್ಸ್ ಡೈಮಂಡ್ ಹಂಟ್ ಅವಾರ್ಡ್ ಸ್ಪರ್ಧೆ ಆಯೋಜಿಸಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಪರೀಕ್ಷೆ ಬರೆದಿರುವ ರಾಜ್ಯ ಪರೀಕ್ಷಾ ಮಂಡಳಿ, ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು ಇದನ್ನು ಪ್ರಥಮ ಪಿಯುಸಿ ಪರೀಕ್ಷೆಯ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ.ಪರೀಕ್ಷೆ ಶಹಾಪೂರದ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ ಭಾಗಿಯಾಗುವ ಸಮಯವನ್ನು ಕಡಿಮೆಗೊಳಿಸಿದ್ದೇವೆ.ಶೇ.95 ಪಡೆದುಕೊಂಡರೂ ಮಗುವಿಗೆ ಪ್ರೋತ್ಸಾಹಿಸದೇ ಶೇ.98 ತಗೆದುಕೊಳ್ಳುವವರೆಗೂ ನಮಗಿಂದು ಸಮಾಧಾನ ಇರುವುದಿಲ್ಲ.ಅಂಕಗಳ ಬೆನ್ನು ಹತ್ತಿದ್ದೇವೆ ಎಂದು ಗದಗನ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎ.ಎನ್.ನಾಗರಳ್ಳಿ ಹೇಳಿದರು. ಪಟ್ಟಣದ ಶ್ರೀ ಕೃಷ್ಣ ಮಂಗಲಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿoದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ