ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ದಿಂದ ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಆರು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಮೀನಾಕ್ಷಿ ಹಾಗೂ ಬಿ. ಹೊಸಹಳ್ಳಿಯ ಸುಮಿತೇಗೌಡ ಮೃತ ಪಟ್ಟಿದ್ದಾರೆ. ಸುಮಿತ್ರೇಗೌಡ ಮನೆಯಲ್ಲಿ ಕುಸಿದು ಬಿದ್ದು ಅಸುನೀಗಿದರು.
ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಹೃದಯಾ ಘಾತವಾಗಿ ಬೆಂಗಳೂರಿನ ಜಯನಗರದ ನಿವಾಸಿ ರಂಗನಾಥ್ ಅಸುನೀಗಿದ್ದಾರೆ. ಪತ್ನಿ, ಪುತ್ರಿ ಜೊತೆ ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದರು. ಟ್ರಿಪ್ ಮುಗಿಸಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ಎದೆ ನೋವು ಕಾಣಿ ಸಿಕೊಂಡಿತು.
ಹೊಳೆನರಸೀಪುರ ಹಾಸನದ ತಾಲೂಕಿನ ಕೊಂಗಲಬೀಡಿನ ಆನಂದ್ ಹೃದಯಾಘಾತದಿಂದ ಸಾವನ್ನ ಪ್ಪಿದ್ದಾರೆ. ಭಾನುವಾರ ಮುಂಜಾನೆ 4ರ ಸುಮಾರಿಗೆ ತೀವ್ರ ಎದೆನೋವು ಕಾಣಿಸಿದೆ. ಯಾದಗಿರಿ ಜಿಲ್ಲೆಯ ಶೆಟ್ಟಿಕೇರಾ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಅಗ್ನಿ ಕುಂಡ ತುಳಿದ ಕೆಲ ಗಂಟೆಗಳಲ್ಲೇ ಹಳ್ಳೆಪ್ಪ ಪೂಜಾರಿ ಹಠಾತ್ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.
ಅಗ್ನಿಕುಂಡ ತುಳಿದ ನಂತರ ದೇಗುಲ ಪಕ್ಕದ ಕೊಠಡಿಯಲ್ಲಿ ಕುಳಿತು ನೀರು ಕುಡಿಯುವಷ್ಟರಲ್ಲಿ ಕುಸಿದು ಬಿದ್ದಿದ್ದಾರೆ. ಚಾಮರಾಜನಗರದಲ್ಲಿ 52 ವರ್ಷದ ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು, ಅಲ್ಲಿಯೇ ಅಸುನೀಗಿದರು.