70,000 cusecs of water released from Krishna river

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರ ಜಲಾಶಯದ 22 ಕ್ರಸ್ಟಗೇಟ್‌ಗಳನ್ನು ತೆರದು 59,180 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಶುಕ್ರವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 70,000 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರಿತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ.

ಕೃಷ್ಣಾ ಪ್ರದೇಶದಲ್ಲಿ ಜಲಾನಯನ ನಿರಂತರ ಮಳೆಯಾಗುತ್ತಿರುವದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಪ್ರತಿ ಉಭಯ ಗಂಟೆಗೊಮ್ಮೆ ಜಲಾಶಯಗಳ ಅಧಿಕಾರಿಗಳು ನದಿಗೆ ನೀರು ಹರಿಸುವ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಒಂದೊಮ್ಮೆ ಒಳಹರಿವು ಹೆಚ್ಚಾದರೆ ಹೊರ ಹರಿವು ಹೆಚ್ಚಿಸಲಾಗುತ್ತದೆ. ಒಳಹರಿವು ತಗ್ಗಿದರೆ ಹೊರ ಹರಿವು ಕಡಿಮೆ ಆಗುತ್ತದೆ. ಹಿಗಾಗಿ ನದಿ ತೀರದ ಗ್ರಾಮಗಳ ಜನರು ಎಚ್ಚರದಿಂದ ಇರಬೇಕು ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ವಿಜಯ ಅರಳಿಯವರು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಮಾಹಿತಿಯಂತೆ ಗರಿಷ್ಠ 492.25 -ರ ಎತ್ತರದಲ್ಲಿ 33.313 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 492.25ಮೀಟರಗೆ ನೀರು ಬಂದು ತಲುಪಿದ್ದು, ಮಾಹಿತಿ 26,39 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಮೀನುಗಾರರ ಹೇಳಿಕೆ : ದಿನಕ್ಕೆ 2 ಕೆಜಿ ಮೀನು ಸಿಗಬೇಕಾದರೆ ಹರಸಹಾಸ ಪಡಬೇಕಾಗುತ್ತದೆ ಹಾಗಾಗಿ ಮೀನುಗಳ ಸಿಗದೇ ಪರದಾಡುತ್ತಿದ್ದಾರೆ ಎಂದು ಅಜಯ್ ನಾಯಕ ತಿಳಿಸಿದರು.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ