ಇಳಕಲ್: ತಾಲೂಕಿನ ನಂದವಾಡಗಿ ಗ್ರಾಮದ ಎ ಬಿ ಟಿ ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯ ಪೂಜ್ಯರಾದ ತಪೋನಿಧಿ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು ಮಹಾಸ್ವಾಮಿಗಳು ನೆರೆವರಿಸಿದರು.
ಧ್ವಜಾರೋಹಣ ನೆರವೇರಿಸಿದ ಪೂಜ್ಯರು ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಬ್ರಿಟಿಷರ ದೌರ್ಜನ್ಯಕ್ಕೆ ಸಿಲುಕಿ ಲಕ್ಷಾಂತರ ಜನ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರು ಹಲವರು ಗಲ್ಲಿಗೇರಿಅಲ್ಪಟ್ಟರು. ಈ ಎಲ್ಲಾ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿದ್ದೇವೆ.
Join Our Telegram: https://t.me/dcgkannada
ಇಂದು ದೇಶಾದ್ಯಂತ ಪ್ರತಿ ಹಳ್ಳಿಗಳಲ್ಲಿ ಪಟ್ಟಣಗಳಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಮಕ್ಕಳು ಹಿರಿಯರಿಗೆ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ದೇಶಪ್ರೇಮವನ್ನುಹೆಚ್ಚಾಗಿ ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಕಿರಿಯ ಪೂಜ್ಯರಾದ ಅಭಿನವ ಶ್ರೀ ಡಾ. ಚನ್ನಬಸವ ಶಿವಾಚಾರ್ಯರು ಹಾಗೂ ಮಾತೋಶ್ರೀ ಗುರುದೇವಿ ಹಿರೇಮಠ ಉಪಸ್ಥಿತರಿದ್ದರು.
ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ ಧ್ವಜಾರೋಹಣ
ಈ ಸಂದರ್ಭದಲ್ಲಿ ಮಕ್ಕಳ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊದಿಂಗೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ಮಕ್ಕಳ ಪಾಲಕರು ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.