8 thousand cusecs of water released from Basavasagar reservoir

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ ಜಲಾಶಯದ ಗರಿಷ್ಠ ಎತ್ತರದಲ್ಲಿ 491.5 ಮೀಟರ್‌ವರೆಗೂ ನೀರು ಸಂಗ್ರಹಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ, ಶನಿವಾರ ಬೆಳಗ್ಗೆವರೆಗೆ 10 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತದೆ. ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಯಾವುದೇ ಚಟುವಟಿಕೆ ನಡೆಸದಂತೆ ಕೆಬಿಜೆಎನ್ ಎಲ್ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ ಮಾಹಿತಿ ನೀಡಿದ್ದಾರೆ.

ಇಇ ಹಣಮಂತ ಕೊಣ್ಣೂರ, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಅರ್ಚಕ ರಾಘವೇಂದ್ರ ಆಚಾರ್ಯ, ಎಇಗಳಾದ ವಿಜಯ ಅರಳಿ, ಬಾಲಸುಭ್ರಮಣ್ಯಂ, ವಿರೇಶ, ಮಲ್ಲಿಕಾರ್ಜುನ, ಸುಮೀತ, ಬಾಲಚಂದ್ರ, ಹಣಮಂತ, ಸಿದ್ದು ವಡವಡಗಿ, ವಿರೇಶ ಮತ್ತಿತರರಿದ್ದರು.

ಜಲಾಶಯದ ಮಟ್ಟ: ಜಲಾಶಯದ ಗರಿಷ್ಠ ಮಟ್ಟ

492.25ಮೀ.ನಲ್ಲಿ ಇಂದು 490.99 ಮೀಟರ್ಗೆ ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿ ಗಳಲ್ಲಿ 27.80 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಒಳಹರಿವು 20ಸಾವಿರ ಕ್ಯೂಸೆಕ್ ಇದ್ದರೆ, ಹೊರ ಹರಿವು 8 ಸಾವಿರ ಕ್ಯೂಸೆಕ್ ಇದೆ.

ವರದಿ : ಶಿವು ರಾಥೋಡ

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ