9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ ಮಾಡಲಾಗಿದ್ದು ಸಂಘವು ಒಟ್ಟು 9.49 ಲಕ್ಷ ರೂ.ಲಾಭ ಮಾಡಿದೆ ಎಂದು ಹಡಲಗೇರಿ ವಿವಿದೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗಪ್ಪ ಸಿ.ಮುದ್ನಾಳ ಹೇಳಿದರು.

ತಾಲ್ಲೂಕಿನ ಹಡಲಗೇರಿಯಲ್ಲಿ ಸೋಮವಾರ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದ 15 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದರೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಸಂಘದ ನಿಕಟಪೂರ್ವ ಅಧ್ಯಕ್ಷ ಭೀಮಣ್ಣ ಮಳಗೌಡರ ಮಾತನಾಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಣ್ಣ ಮುದ್ನಾಳ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಸಂಘದ ನಿಧಿ 48.14 ಲಕ್ಷ ರೂ., ಠೇವು 218.48 ಲಕ್ಷ ರೂ. ಸಂಘದಿAದ ಪಡೆದ ಸಾಲ 447.05 ಲಕ್ಷ ರೂ. ಹೂಡಿಕೆ 637.04 ಲಕ್ಷ ರೂ.ಇರುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಘದ ಶೇರು ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷ ಶಿವಬಸಪ್ಪ ಇಟಗಿ, ನಿರ್ದೇಶಕರುಗಳಾದ ಬಸಪ್ಪ ಹರಿಂದ್ರಾಳ, ಶಿವಾಜಿ ಚವ್ಹಾಣ, ಅಡಿವೆಪ್ಪ ಮುದ್ನಾಳ, ನಿಂಗಪ್ಪ ಹರನಾಳ, ಪರಸಪ್ಪ ತಳವಾರ, ಸಿದ್ದಪ್ಪ ಚಲವಾದಿ,ರೇಣುಕಾ ಮಳಗೌಡರ, ಶಿವುಬಾಯಿ ಜಾರೆಡ್ಡಿ,ಬಸವರಾಜ ನಾಡಗೌಡರ, ಹೂಳೆಪ್ಪ ಗಂಜಿಹಾಳ, ಕ್ಷೇತ್ರಾಧಿಕಾರಿ ಎನ್.ಸಿ.ಸಾಸನೂರ, ಸಿಬ್ಬಂದಿ ಚಂದ್ರಕಲಾ ಕುಲಕರ್ಣಿ, ಬೀರಪ್ಪ ವಾಲಿಕಾರ ಹಾಗೂ ಹಡಲಗೇರಿ, ಮುದ್ನಾಳ,ಮುದ್ನಾಳ ಎಲ್ ಟಿ. ಯ ಸಂಘದ ಸದಸ್ಯರು ಭಾಗವಹಿಸಿದ್ದರು.ಶಿಕ್ಷಕ ಎಂ.ಎ.ತಳ್ಳಿಕೇರಿ ನಿರೂಪಿಸಿದರು.ಸಿದ್ಧಣ್ಣ ಚಲವಾದಿ ವಂದಿಸಿದರು.

Latest News

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ:                                        ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ: ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಮುದ್ದೇಬಿಹಾಳ : ಸುಮಾರು 30-40 ವರ್ಷದಿಂದ ಪಟ್ಟಣದ ಪಿಲೆಕೆಮ್ಮ ನಗರದಲ್ಲಿ ವಾಸವಿರುವ ನಿವಾಸಿಗಳಿಗೆ ಸರ್ಕಾರದಿಂದ

ನಾಗರಬೆಟ್ಟ ಏತ ನೀರಾವರಿ ಯೋಜನೆ:                                ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ ಕಾರ್ಯಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಆಗ್ರಹಿಸಿದರು. ಪಟ್ಟಣದ ಮುದ್ದೇಬಿಹಾಳ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ(ಪಿಕಾರ್ಡ್)ದ ಬ್ಯಾಂಕ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ 62ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕಳೆದ 3 ವರ್ಷಗಳಿಂದ ನಮ್ಮ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಸತತ ಮೂರುಬಾರಿ ಜಿಲ್ಲೆಗೆ ಪ್ರಥಮ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ ಮಾಡಿಕೊಳ್ಳಬೇಕು ಎಂದು ಕೆಬಿಜೆಎನ್‌ಎಲ್ ಎಎಲ್‌ಬಿಸಿ ಉಪವಿಭಾಗ ನಂ.2ದ ಅಧಿಕಾರಿ ನಮ್ಮ ರೈತರಿಗೆ ಪುಕ್ಕಟೆ ಸಲಹೆ ಕೊಡುತ್ತಿದ್ದಾರೆ ಎಂದು ನಾಲತವಾಡದ ಯುವ ರೈತ ಮುಖಂಡ ಸಂಗಮೇಶ ಮೇಟಿ ಆರೋಪಿಸಿದರು. ತಾಲ್ಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯಲ್ಲಿ ಹಾಯ್ದು ಹೋಗಿರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಲ್ಯಾಟರಲ್ ನಂ.10ರ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪಟ್ಟಣದ ಹುಡ್ಕೋದಲ್ಲಿರುವ ಸಂಬAಧಿಸಿದ