ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಮುದ್ದೇಬಿಹಾಳ : ಸಮಾಜದಲ್ಲಿ ನಮಗೆ ದೊರೆಯುತ್ತಿರುವ ಗೌರವ,ಸನ್ಮಾನಗಳು ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿವೆ ಎಂದು ಅಂಜುಮನ್ ಇಸ್ಲಾಂ ಕಮೀಟಿ ಹಿರಿಯ ಸದಸ್ಯ ಅಬ್ದುಲಗಫೂರ ಮಕಾನದಾರ ಹೇಳಿದರು.

ಪಟ್ಟಣದ ಅಮಾನತ್ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಜುಮನ್ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಹಳ ವರ್ಷಗಳ ನಂತರ ಅಂಜುಮನ್ ಕಮೀಟಿಗೆ ಹೊಸ ಆಡಳಿತ ಮಂಡಳಿ ರಚನೆಯಾಗಿದೆ.ಇಸ್ಲಾಂ ಸಮಾಜದ ಏಳ್ಗೆಗೆ ಎಲ್ಲರೂ ಪಣ ತೊಟ್ಟು ಶ್ರಮಿಸೋಣ ಎಂದರು.

ಅಮಾನತ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಎಲ್.ಎನ್.ನಾಯ್ಕೋಡಿ ,ಅಂಜುಮನ್ ಕಮೀಟಿ ಅಧ್ಯಕ್ಷ ಅಲ್ಲಾಭಕ್ಷ ದೇಸಾಯಿ ಮಾತನಾಡಿದರು.ಅಂಜುಮನ್ ಕಮೀಟಿಗೆ ಆಯ್ಕೆಯಾದ ಆಡಳಿತ ಮಂಡಳಿ ಎಲ್ಲ ಪದಾಧಿಕಾರಿಗಳು,ಸದಸ್ಯರನ್ನು ಸನ್ಮಾನಿಸಲಾಯಿತು.

ಅಮಾನತ ಅಲ್ಪಸಂಖ್ಯಾತರ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಮಲಕಾರಿ ನದಾಫ,ಉಪಾಧ್ಯಕ್ಷ ಇಸಾಕ ದಖನಿ, ನಿರ್ದೇಶಕರಾದ ಎಂ.ಬಿ.ಜಕ್ಕೇರಾಳ,ಭಾಷಾ ಮುಲ್ಕಿಸಿಪಾಯಿ, ಇಬ್ರಾಹಿಂ ಮಾಗಿ, ಲಾಳೇಮಶ್ಯಾಕ ನಾಯ್ಕೋಡಿ,ಲಾಳೇಸಾ ಢವಳಗಿ,ವ್ಯವಸ್ಥಾಪಕ ಎ.ಎ.ಮೋಮಿನ,ಇಸಾಕ್ ಮೋಮಿನ,ಬಿ.ಎ.ನಾಯ್ಕೋಡಿ,ಪಿಗ್ಮಿ ಸಂಗ್ರಾಹಕರಾದ ಆಸೀಫ ಕವಡಿಮಟ್ಟಿ,ಕೃಷ್ಣಾ ಅಗ್ನಿಹೋತ್ರಿ ಇದ್ದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್