ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುದ್ದೇಬಿಹಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಮಡಿಕೇಶ್ವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೇಗೆ ಜರುಗಿದ್ದು ಈ ಕ್ರೀಡಾಕೂಟದಲ್ಲಿ ಬಿದರಕುಂದಿ ಶಾಲೆಯ 14 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್ ಆಟದಲ್ಲಿ ತಾಲೂಕ ಮಟ್ಟದಲ್ಲಿ ಗೆದ್ದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಗುರು ಅನಿಲ್ಕುಮಾರ್ ರಾಥೋಡ್ ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎ.ಸಿ.ಕೆರೂರ, ದೈಹಿಕ ಶಿಕ್ಷಣ ಶಿಕ್ಷಕರಾದ ಎನ್ .ಎಸ್. ಬಿರಾದಾರ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಬಿ.ಕುಂಬಾರ,ಎಸ್ಡಿಎoಸಿ ಪದಾಧಿಕಾರಿಗಳು,ಗ್ರಾಮಸ್ಥರು ಅಭಿನಂದಿಸಿದ್ದಾರೆ.







