ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ ಕಾರ್ಖಾನೆಯು ನಡೆದುಕೊಳ್ಳಲಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ನಂತರವೇ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ಯರಗಲ್ ಮದರಿಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಅಂಡ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಖಾನೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಯ್ಲರ್ ಪ್ರದೀಪನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಔಪಚಾರಿಕವಾಗಿ ಮಾತನಾಡಿದರು.
ರಾಜ್ಯದಲ್ಲಿ ಕಬ್ಬಿನ ಎಂ.ಎಸ್.ಪಿ ದರ ಹೆಚ್ಚಳ ಮಾಡುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳಿAದ ಹೋರಾಟ ನಡೆಯುತ್ತಿರುವುದು ನಮ್ಮ ಗಮನಕ್ಕಿದೆ.ಕೇಂದ್ರ ಸರ್ಕಾರ ನೀಡುವ ಸೂಚನೆಗೆ ನಾವು ಬದ್ಧರಾಗಿರಬೇಕಾಗುತ್ತದೆ.ಸದ್ಯಕ್ಕೆ ನಾವು ಒಳ್ಳೆಯ ಮಹೂರ್ತ ಇರುವುದರಿಂದ ಬಾಯ್ಲರ್ ಪೂಜೆ ಅಷ್ಟೇ ಮಾಡಿದ್ದೇವೆ ಎಂದು ತಿಳಿಸಿದರು.
ಕಾರ್ಖಾನೆಯ ನಿರ್ದೇಶಕರಾದ ಎಚ್.ಜಿ.ಪಾಟೀಲ್,ಡಾ.ಅಜಿತ್ ಕನಕರೆಡ್ಡಿ, ರಾಹುಲ್‌ಗೌಡ ಪಾಟೀಲ್, ಶ್ರೀನಿವಾಸ ಅರಕೇರಿ, ಅಧಿಕ್‌ಗೌಡ ಪಾಟೀಲ್, ಪ್ರಫುಲ್‌ಗೌಡ ಪಾಟೀಲ್,ಪ್ರಜ್ವಲ್‌ಗೌಡ ಎಚ್.ಪಾಟೀಲ್,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ,ಸೋಮನಗೌಡ ಪಾಟೀಲ ನಡಹಳ್ಳಿ,ಶಿವಪ್ಪಗೌಡ ತಾತರೆಡ್ಡಿ,ಎಂ.ಬಿ.ನಾವದಗಿ,ಲಕ್ಷö್ಮಣ ಬಿಜ್ಜೂರ,ಕಾಮರಾಜ ಬಿರಾದಾರ, ಶಾಸಕರ ಆಪ್ತ ಸಹಾಯಕ ಮಲ್ಲಿಕಾರ್ಜುನ ಬಾಗೇವಾಡಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ,ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾರುತಿ ಗುರವ ಸೇರಿದಂತೆ ಕಾರ್ಖಾನೆಗೆ ಕಬ್ಬು ಪೂರೈಸುವ ತಾಲ್ಲೂಕಿನ ಕಬ್ಬು ಬೆಳೆಗಾರರು ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.







