ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಅ. 18ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ಹುಡ್ಕೋ ಕಾಲೋನಿಯ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕುಂಟೋಜಿ ಸುಕ್ಷೇತ್ರದ ಭಾವೈಕ್ಯತೆ ಹಿರೇಮಠದ ಪೂಜ್ಯ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಾಮಿಯಾತ್ ಉಲಮಾ ಎ ಹಿಂದ್‌ನ ತಾಲೂಕು ಘಟಕದ ಕಾರ್ಯದರ್ಶಿ ಮೌಲಾನಾ ಮಹಮ್ಮದ ರಫೀಕ್ ನದಾಫ್ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಸಿ.ಎಸ್. ನಾಡಗೌಡ (ಅಪ್ಪಾಜಿ) ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ತಾಲೂಕು ಘಟಕದ ಅಧ್ಯಕ್ಷ ಹಾಗೂ ಅಮಾನತ್ ಅಲ್ಪಸಂಖ್ಯಾತರ ಪತ್ತಿನ ಸೌಹಾರ್ದ ನನಿಯಮಿತ ಅಧ್ಯಕ್ಷ ಮಲಿಕಸಾಬ ದಾ. ನದಾಫ್ (ಅಮರಗೋಳ) ಅಧ್ಯಕ್ಷತೆ ವಹಿಸಲಿದ್ದಾರೆ.
ದೇವರಹಿಪ್ಪರಗಿ ಶಾಸಕ ರಾಜೂಗೌಡ ಪಾಟೀಲ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಎ. ಕಟಗೂರ, ವಿಜಯಪುರ ಜಿಲ್ಲಾ ನದಾಫ್/ಪಿಂಜಾರ ಸಂಘದ ಅಧ್ಯಕ್ಷ ಎಂ.ಕೆ. ನದಾಫ್, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಅಲ್ಲಾಭಕ್ಷ ಎನ್. ದೇಸಾಯಿ, ಉದ್ಯಮಿ ಮಹೆಬೂಬ ಮುಲ್ಲಾ, ಹಿರಿಯ ನ್ಯಾಯವಾದಿ ಎಂ.ಎ. ಮುದ್ದೇಬಿಹಾಳ, ಬಿ.ಎಸ್. ಸೆಂಟ್ರಲ್ ಸ್ಕೂಲ್ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್. ಮುದ್ದೇಬಿಹಾಳ ಹಾಗೂ ಕರ್ನಾಟಕ ಮುಸ್ಲಿಂ ಸಂಘದ ಅಧ್ಯಕ್ಷ ಲಾಳೇಸಾ ಕೆ. ನದಾಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸಮಾಜದ ಗಣ್ಯರನ್ನು ಸನ್ಮಾನಿಸಲಾಗುವುದು. ಸಂಘದ ನೂತನ ಉಪಾಧ್ಯಕ್ಷ ಹಸನಸಾ ಎಸ್. ನದಾಫ್ ಸೇರಿದಂತೆ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಪದಗ್ರಹಣ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ







