ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

Ad
Ad

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

Ad
Ad

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500