ಮುದ್ದೇಬಿಹಾಳ : ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ “ನಮ್ಮ ಶಾಲೆ – ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಬಸವ ಇಂಟರನ್ಯಾಶನಲ್ ಶಾಲೆಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದ್ದು ಅದರಲ್ಲಿ ವಿಜಯಪುರ ಜಿಲ್ಲೆಯ ನಾಲ್ಕು ಪ್ರತಿಷ್ಠಿತ ಶಾಲೆಗಲ್ಲಿ ಮುದ್ದೇಬಿಹಾಳದ ಬಸವ ಇಂಟರ್ನ್ಯಾಷನಲ್ ಶಾಲೆಯನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊAಡ ಶಾಲೆಯ ಪ್ರಾಚಾರ್ಯೆ ಪ್ರಭಾ ಚಿನಿವಾರ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕುರಿತಾದ ವಿಷಯ ಚರ್ಚೆಗೆ ಸಿಎಂ ಡಿ.ಕೆ.ಶಿವಕುಮಾರ,ಶಿಕ್ಷಣ ಸಚಿವ ಮಧು ಬಂಗಾರಪ್ಪ,ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಶ್ಮಿ ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವವನ್ನು ಉತ್ತೇಜಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಬಿಇಎಸ್ ಶಾಲೆಯ ಮುಖ್ಯಸ್ಥ ಶಿವಕುಮಾರ ಹರ್ಲಾಪುರ ಪಾಲ್ಗೊಂಡಿದ್ದರು







