ಮುದ್ದೇಬಿಹಾಳ : ಮುದ್ದೇಬಿಹಾಳ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ 2026-27ನೇ ಸಾಲಿನ ಮಾರ್ಗಸೂಚಿ ಬೆಲೆಗಳನ್ನು (ಗೈಡಲೈನ್ಸ್ ವ್ಯಾಲ್ಯೂ) ಪರಿಷ್ಕರಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದೆ.
ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಹಶೀಲದಾರರ ಅಧ್ಯಕ್ಷತೆಯಲ್ಲಿ ನವೆಂಬರ್ 7 ರಂದು ನಡೆದ ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪಸಮೀತಿ ಸಭೆಯಲ್ಲಿ ಈ ಬೆಲೆ ಪರಿಷ್ಕರಣೆಯ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಬೆಲೆ ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಉಪ ನೋಂದಣಿ ಕಛೇರಿಯಲ್ಲಿ ಪ್ರಕಟಿಸಲಾಗಿದೆ.
ವಿಧಾನ: ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಉಪ ನೋಂದಣಿ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಹಾಗೂ ಕರಡು ಪ್ರತಿ ಪರಿಶೀಲಿಸಲು ಸಾರ್ವಜನಿಕರು ಮುದ್ದೇಬಿಹಾಳ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಪ ನೋಂದಣಾಧಿಕಾರಿ ಸಚೀನ ಖೈನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







