ಎರಡು ದಿನಗಳಲ್ಲಿ ಕಾಲುವೆಗಳಿಗೆ ನೀರು: ಅಧಿಕಾರಿಗಳೊಂದಿಗೆಶಾಸಕ ನಾಡಗೌಡರ ಸಮಾಲೋಚನೆ

ಎರಡು ದಿನಗಳಲ್ಲಿ ಕಾಲುವೆಗಳಿಗೆ ನೀರು: ಅಧಿಕಾರಿಗಳೊಂದಿಗೆಶಾಸಕ ನಾಡಗೌಡರ ಸಮಾಲೋಚನೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ರೈತರ ಜಮೀನುಗಳಿಗೆ ನೀರು ಸಿಗದೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರಾದ ಸಿ.ಎಸ್. ನಾಡಗೌಡ(ಅಪ್ಪಾಜಿ) ಅವರು ಸಚಿವರು ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮುದ್ದೇಬಿಹಾಳ ತಾಲ್ಲೂಕಿನ ರೈತರು ಕಾಲುವೆಗಳಿಗೆ ನೀರು ಹರಿಸಿದ್ದಲ್ಲಿ ಅಳಿದುಳಿದ ಬೆಳೆಯನ್ನು ತಗೆದುಕೊಳ್ಳಲು ಸಾಧ್ಯವಾಗುತ್ತದೆ.ಈ ಹಿನ್ನೆಲೆಯಲ್ಲಿ ನೀರು ಹರಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದರು.ಅದರಂತೆ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ,ಬೆಳಗಾವಿ ಪ್ರಾದೇಶಿಕ ಆಯುಕ್ತರು,ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿ ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಚಿಮ್ಮಲಗಿ ಏತ ನೀರಾವರಿ ಹಾಗೂ ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ಕೂಡಲೇ ನೀರು ಬಿಡುವಂತೆ ಮನವರಿಕೆ ಮಾಡಿದರು.ಇದಕ್ಕೆ ಸ್ಪಂದಿಸಿರುವ ಸಚಿವರು ಹಾಗೂ ಅಧಿಕಾರಿಗಳು ಎರಡು ದಿನಗಳಲ್ಲಿ ಸಮಾಲೋಚಿಸಿ ನೀರು ಹರಿಸುವ ಭರವಸೆ ನೀಡಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಬಸವಣ್ಣನವರ ಅವಹೇಳನ : ಬಸವಾಭಿಮಾನಿಗಳ ಆಕ್ರೋಶ

ಬಸವಣ್ಣನವರ ಅವಹೇಳನ : ಬಸವಾಭಿಮಾನಿಗಳ ಆಕ್ರೋಶ

ಮುದ್ದೇಬಿಹಾಳ : ಬಸವಣ್ಣನವರ ಬಗ್ಗೆ ಬಂದಿರುವಷ್ಟು ಸಾಹಿತ್ಯ ಬೇರೆಯವರ ಬಗ್ಗೆ ಬಂದಿಲ್ಲ.ಆದರೆ ಕೆಲವು ಕುತ್ಸಿತ

ನ.24 ರಂದು ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

ನ.24 ರಂದು ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ಹಾಗೂ

ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಮುದ್ದೇಬಿಹಾಳ : ತಾಲೂಕಿನ ಯರಗಲ್‌ನಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಯು 2026–27ನೇ ಸಾಲಿನ ಕಬ್ಬು ನುರಿಸುವ

34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ:                      ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ: ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಹತ್ವದ

ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ; ಆಕ್ಷೇಪಣೆ ಸಲ್ಲಿಕೆಗೆ ಸೂಚನೆ

ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ; ಆಕ್ಷೇಪಣೆ ಸಲ್ಲಿಕೆಗೆ ಸೂಚನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಉಪ ನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ 2026-27ನೇ ಸಾಲಿನ ಮಾರ್ಗಸೂಚಿ ಬೆಲೆಗಳನ್ನು (ಗೈಡಲೈನ್ಸ್ ವ್ಯಾಲ್ಯೂ) ಪರಿಷ್ಕರಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದೆ. ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಹಶೀಲದಾರರ ಅಧ್ಯಕ್ಷತೆಯಲ್ಲಿ ನವೆಂಬರ್ 7 ರಂದು ನಡೆದ ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪಸಮೀತಿ ಸಭೆಯಲ್ಲಿ ಈ ಬೆಲೆ ಪರಿಷ್ಕರಣೆಯ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಬೆಲೆ ಪಟ್ಟಿಯ ಕರಡು

ಸಮಾಜ ಸೇವಕ ಎಂ.ಎನ್.ಮದರಿ ಹೇಳಿಕೆ :                                    ನ.10 ರಂದು ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ,ಧರ್ಮಸಭೆ

ಸಮಾಜ ಸೇವಕ ಎಂ.ಎನ್.ಮದರಿ ಹೇಳಿಕೆ : ನ.10 ರಂದು ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ,ಧರ್ಮಸಭೆ

ಮುದ್ದೇಬಿಹಾಳ : ತಾಲ್ಲೂಕಿನ ಅಡವಿ ಹುಲಗಬಾಳದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ಮತ್ತು ಸಿಡಿಯಾನ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ನ.10 ರಂದು ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಾತ್ರಾ ಮಹೋತ್ಸವದ ಸ್ವಾಗತ ಸಮೀತಿ ಅಧ್ಯಕ್ಷರು,ಸಮಾಜ ಸೇವಕ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಪಲ್ಲವಿ ಹೊಟೇಲ್‌ದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕಳೆದ ಎರಡು ವರ್ಷಗಳಿಂದ ಜಾತ್ರಾ ಕಾರ್ಯಕ್ರಮ ಮಾತ್ರ ಜರುಗಿದ್ದು ಯಾವುದೇ ಸಾಮೂಹಿಕ ಮದುವೆಗಳು