ಆರ್.ಬಿ. ಶುಗರ್ಸ್’ರಿಂದ ಕಬ್ಬು ದರ ಘೋಷಣೆಗೆ ಆಗ್ರಹ: ದರ ಪ್ರಕಟಿಸದೆ ಕಬ್ಬು ನುರಿಸುವ ಕಾರ್ಯ ಆರಂಭ ; ರೈತರಲ್ಲಿ ಆತಂಕ

ಆರ್.ಬಿ. ಶುಗರ್ಸ್’ರಿಂದ ಕಬ್ಬು ದರ ಘೋಷಣೆಗೆ ಆಗ್ರಹ: ದರ ಪ್ರಕಟಿಸದೆ ಕಬ್ಬು ನುರಿಸುವ ಕಾರ್ಯ ಆರಂಭ ; ರೈತರಲ್ಲಿ ಆತಂಕ

ತಾಳಿಕೋಟಿ : ಮುದ್ದೇಬಿಹಾಳ ತಾಲ್ಲೂಕಿನ ಹಲವು ರೈತರು ರಾಯಚೂರು ಜಿಲ್ಲೆಯಲ್ಲಿರುವ ಆರ್.ಬಿ. ಶುಗರ್ಸ್ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡುತ್ತಿದ್ದು, ಕಾರ್ಖಾನೆಯ ಆಡಳಿತ ಮಂಡಳಿಯು ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದರೂ ಈವರೆಗೆ ಕಬ್ಬಿನ ದರ ಘೋಷಿಸದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಕೂಡಲೇ ಕಾರ್ಖಾನೆಯು ಕಬ್ಬಿನ ದರ ಪ್ರಕಟಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ದೇವರಾಜ ಗುಂಡಕನಾಳ ಅವರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ತಾಳಿಕೋಟಿ ತಹಶೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿರುವಂತೆ, ಆರ್.ಬಿ. ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು ಕಬ್ಬು ನುರಿಸುವ ಕಾರ್ಯ ಆರಂಭಿಸುವ ಮುನ್ನವೇ ದರ ಘೋಷಣೆ ಮಾಡುವುದಾಗಿ ತಿಳಿಸಿತ್ತು. ಆದರೆ, ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು, ಈವರೆಗೆ ಅಧಿಕೃತವಾಗಿ ಕಬ್ಬಿನ ದರ ಪ್ರಕಟಿಸಿಲ್ಲ ಎಂಬುದು ಸುದ್ದಿಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದರಿಂದ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರು ತಾವು ಕಷ್ಟಪಟ್ಟು ಬೆಳೆದ ಕಬ್ಬಿಗೆ ಎಷ್ಟು ದರ ದೊರೆಯಲಿದೆ ಎಂಬ ಗೊಂದಲದಲ್ಲಿದ್ದು, ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ರೈತರಲ್ಲಿರುವ ಗೊಂದಲ ಹಾಗೂ ಆತಂಕ ನಿವಾರಿಸುವ ನಿಟ್ಟಿನಲ್ಲಿ ತಹಶೀಲ್ದಾರ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕು. ಕಾರ್ಖಾನೆಯ ಆಡಳಿತ ಮಂಡಳಿಗೆ ಸೂಚನೆ ನೀಡಿ, ಕಬ್ಬಿನ ದರವನ್ನು ಅಧಿಕೃತ ಲೆಟರ್‌ಹೆಡ್‌ನಲ್ಲಿ ಪ್ರಕಟಿಸುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಘೋಷಿತ ದರದ ಮಾಹಿತಿಯನ್ನು ರೈತ ಸಂಘಟನೆ ಹಾಗೂ ಕಬ್ಬು ಬೆಳೆಗಾರರಿಗೆ ಬಹಿರಂಗವಾಗಿ ತಿಳಿಸುವಂತೆ ಒತ್ತಾಯಿಸಿದ್ದಾರೆ.

ಒಂದು ವೇಳೆ ಕೂಡಲೇ ಕಬ್ಬಿನ ದರ ಘೋಷಣೆ ಮಾಡದಿದ್ದರೆ, ರೈತರ ಹಿತದೃಷ್ಟಿಯಿಂದ ಪ್ರಜಾಸತ್ತಾತ್ಮಕ ರೀತಿಯಲ್ಲಿ ಕಾರ್ಖಾನೆಯ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ದೇವರಾಜ ಗುಂಡಕನಾಳ ಎಚ್ಚರಿಸಿದ್ದಾರೆ.ಶಿರಸ್ತೇದಾರ ಪಾರ್ವತಿ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Latest News

ರವಿ ಹಂಜ್ ಚಿತ್ರಕ್ಕೆ ಬೆಂಕಿ:                                                                ಬಸವ ಪರಂಪರೆ ವಿನಾಶಕ್ಕೆ ಷಡ್ಯಂತ್ರ ನಡೆದಿದೆ-ಬಿದರಕುಂದಿ

ರವಿ ಹಂಜ್ ಚಿತ್ರಕ್ಕೆ ಬೆಂಕಿ: ಬಸವ ಪರಂಪರೆ ವಿನಾಶಕ್ಕೆ ಷಡ್ಯಂತ್ರ ನಡೆದಿದೆ-ಬಿದರಕುಂದಿ

ಮುದ್ದೇಬಿಹಾಳ : ವೀರಶೈವ ಲಿಂಗಾಯತರ ಹೆಗಲ ಮೇಲೆ ಬಂದೂಕು ಇಟ್ಟು ಬಸವ ಪರಂಪರೆಯನ್ನು ಹಾಳು

ತನಿಖೆಗೆ ಶಾಸಕ ಸಿ.ಎಸ್.ನಾಡಗೌಡರ ಸೂಚನೆ:                       ನಾಗರಬೆಟ್ಟ ಏತ ನೀರಾವರಿ ಯೋಜನೆ ಪೈಪಲೈನ್ ಕಾಮಗಾರಿ ಕಳಪೆ

ತನಿಖೆಗೆ ಶಾಸಕ ಸಿ.ಎಸ್.ನಾಡಗೌಡರ ಸೂಚನೆ: ನಾಗರಬೆಟ್ಟ ಏತ ನೀರಾವರಿ ಯೋಜನೆ ಪೈಪಲೈನ್ ಕಾಮಗಾರಿ ಕಳಪೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯಡಿ ಅಳಡಿಸಿರುವ ಪೈಪಲೈನ್ ಕಳಪೆ ಗುಣಮಟ್ಟದ್ದಾಗಿದೆ ಎಂಬ

ಮುದ್ದೇಬಿಹಾಳ : ನ.25 ರಂದು ಬೃಹತ್ ರಕ್ತದಾನ ಶಿಬಿರ

ಮುದ್ದೇಬಿಹಾಳ : ನ.25 ರಂದು ಬೃಹತ್ ರಕ್ತದಾನ ಶಿಬಿರ

ಮುದ್ದೇಬಿಹಾಳ : ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ನ.25ರಂದು ಬೆಳಿಗ್ಗೆ 9:30 ಗಂಟೆಗೆ

ಆರ್.ಬಿ. ಶುಗರ್ಸ್ ಮೌನಕ್ಕೆ ರೈತರ ಆಕ್ರೋಶ:                                 ಕಬ್ಬು ನುರಿಸುವಿಕೆ ಆರಂಭ, ದರ ಘೋಷಣೆಗೆ ಮೀನಮೇಷ..!

ಆರ್.ಬಿ. ಶುಗರ್ಸ್ ಮೌನಕ್ಕೆ ರೈತರ ಆಕ್ರೋಶ: ಕಬ್ಬು ನುರಿಸುವಿಕೆ ಆರಂಭ, ದರ ಘೋಷಣೆಗೆ ಮೀನಮೇಷ..!

ವಿಶೇಷ ವರದಿ : ಶಂಕರ್ ಹೆಬ್ಬಾಳ ಮುದ್ದೇಬಿಹಾಳ : ಹಲವು ಆಶಾಭಾವನೆ ಹಾಗೂ ಭರವಸೆಗಳೊಂದಿಗೆ

ಬಸವಣ್ಣನವರ ಅವಹೇಳನ : ಬಸವಾಭಿಮಾನಿಗಳ ಆಕ್ರೋಶ

ಬಸವಣ್ಣನವರ ಅವಹೇಳನ : ಬಸವಾಭಿಮಾನಿಗಳ ಆಕ್ರೋಶ

ಮುದ್ದೇಬಿಹಾಳ : ಬಸವಣ್ಣನವರ ಬಗ್ಗೆ ಬಂದಿರುವಷ್ಟು ಸಾಹಿತ್ಯ ಬೇರೆಯವರ ಬಗ್ಗೆ ಬಂದಿಲ್ಲ.ಆದರೆ ಕೆಲವು ಕುತ್ಸಿತ ಮನೋಭಾವದವರು ಸಮಾಜದಲ್ಲಿ ಸಮಾನತೆಯ ವ್ಯವಸ್ಥೆಯನ್ನು ಉರುಳಿಸಬೇಕು ಎನ್ನುವ ಹುನ್ನಾರದಿಂದ ಬಸವಣ್ಣನವರ ಅವಹೇಳನಕ್ಕೆ ಮುಂದಾಗಿರುವುದನ್ನು ಬಸವಾಭಿಮಾನಿಗಳು ಪ್ರಬಲವಾಗಿ ಖಂಡಿಸುವುದಾಗಿ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪುಸ್ತಕ ಬರೆಯಲು ಪ್ರೇರೇಪಣೆ ನೀಡಿದವರನ್ನು ಸಿಎಂ ಪಕ್ಕದಲ್ಲಿ ಕೂಡುತ್ತಾರೆ.ಬಸವಣ್ಣನವರ ಅನುಯಾಯಿಗಳ ಮೌನ,ನಿರ್ಲಕ್ಷ್ಯ ಭಾವನೆಯಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು

ನ.24 ರಂದು ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

ನ.24 ರಂದು ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರರ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಹುಣ್ಣಿಮೆ ಜಾತ್ರೆ ಮತ್ತು ಅನ್ನಪೂರ್ಣೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆ ನ.21 ರಿಂದ 24ರವರೆಗೆ ಜರುಗಲಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ನ.21 ರಂದು ಸಾವಿರಾರು ಕುಂಭಗಳನ್ನು ಹೊತ್ತ ಮಹಿಳೆಯರು ಬೆಳಗ್ಗೆ 9 ರಇಂದ ಪವಾಡ ಬಸವೇಶ್ವರರ ನೂತನ