ಮುದ್ದೇಬಿಹಾಳ : ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಸರಕೋಡ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕುಮಾರ ನೀರಜ ಮಾಶೆಟ್ಟಿ 3000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ನೀರಜ ಮಾಶೆಟ್ಟಿ ಈ ಹಿಂದೆ ಪ್ರೌಢಶಾಲಾ ವಿಭಾಗದಲ್ಲಿಯೂ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದನು. ಇದೀಗ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿಯೂ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜು ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಗ್ರಾಮದ ಹಿರಿಯರು ಹಾಗೂ ಕ್ರೀಡಾಪ್ರೇಮಿ ಶಿಕ್ಷಕ ಪ್ರಕಾಶ ಗೋಂಧಳೆ ಅವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.







