ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರ : ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ         ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 23 ವರೆಗೆ ಬಯಲು

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಶಿವಮೊಗ್ಗ: ಕೋಡಿಮಠ ಸಂಸ್ಥಾನದ ಡಾ.ಶಿವನಾಂದ ಶಿವಯೋಗಿ ರಾಜೇಂದ್ರಸ್ವಾಮಿಗಳು ಮತ್ತೊಂದು ಭವಿಷ್ಯ ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಧರ್ಮಸಭೆಯೊಂದರಲ್ಲಿ ಮಾತನಾಡಿದ ಅವರು, ನಾಯಿಗಳ ದಾಳಿಯಿಂದ ಜನರು ನಿರ್ಭೀತಿಯಿಂದ ಓಡಾಡುವುದಕ್ಕೆ ಕಷ್ಟವಾಗಲಿದೆ. ಅಲ್ಲದೆ ನಾಡಿನಲ್ಲಿ ರೋಗ-ರುಜಿನ ವ್ಯಾಪಿಸಲಿದೆ. ಮಂಗಗಳ ಸಮಸ್ಯೆಗಳೂ ಹೆಚ್ಚಾಗಿ ಫಸಲಿನ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಅಲ್ಲದೆ, ಇನ್ನಷ್ಟು ಮಳೆಯಾಗಲಿದೆ. ಮಳೆಯ ನಡುವೆ ರೈತರಿಗೆ ಇಳುವರಿ ಹೆಚ್ಚಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್'ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ