ಜೀವ ರಕ್ಷಿಸಲು ಹೊರಟ 108 ಅಂಬುಲೆನ್ಸ್ಗೆ ಅಪಘಾತ..! ಚಾಲಕನ ಸ್ಥಿತಿ ಚಿಂತಾಜನಕ

ಜೀವ ರಕ್ಷಿಸಲು ಹೊರಟ 108 ಅಂಬುಲೆನ್ಸ್ಗೆ ಅಪಘಾತ..! ಚಾಲಕನ ಸ್ಥಿತಿ ಚಿಂತಾಜನಕ

ದೊಡ್ಡಬಳ್ಳಾಪುರ: ತುರ್ತು ಕರೆಯ ಹಿನ್ನೆಲೆಯಲ್ಲಿ ರೋಗಿಯನ್ನು ರಕ್ಷಿಸಲು ಹೊರಟಿದ್ದ 108 ಅಂಬುಲೆನ್ಸ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್ ಉರುಳಿ ಬಿದ್ದಿರುವ ಘಟನೆ ಕಳೆದ ರಾತ್ರಿ ಟಿ.ಬಿ.ಸರ್ಕಲ್‌ ಬಳಿ ಸಂಭವಿಸಿದೆ.

ಘಟನೆಯಲ್ಲಿ ಆಂಬುಲನ್ಸ್ ಚಾಲಕ ಗಂಗಾಧರ್ ಅವರಿಗೆ ತಲೆ ಹಾಗೂ ಪಕ್ಕೆಲುಬಿಗೆ ತೀವ್ರ ಪೆಟ್ಟಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಸ್ ಎಸ್ ಘಾಟಿ ವ್ಯಾಪ್ತಿಯ ಆಂಬುಲನ್ಸ್ ಇದಾಗಿದ್ದು, ಗುರುವಾರ ರಾತ್ರಿ ದೊಡ್ಡಬೆಳವಂಗಲದಿಂದ ಬಂದ ತುರ್ತು ಕರೆಯ ಹಿನ್ನೆಲೆಯಲ್ಲಿ ರೋಗಿಯನ್ನು ಕರೆತರಲು 108 ಅಂಬುಲೆನ್ಸ್ ಹೊರಟಿತ್ತು.

ಈ ವೇಳೆ ಟಿ.ಬಿ.ವೃತ್ತದ ಬಳಿ ತಿರುವು ಪಡೆಯುವಾಗ ಬೆಂಗಳೂರು ಕಡೆಯಿಂದ ಬಂದ ಕಾರು ವೇಗವಾಗಿ ಅಂಬುಲೆನ್ಸ್‌ನ ಹಿಂದಿನ ಚಕ್ರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್‌ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ.

ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ