ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!

ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!

Ad
Ad

Ad
Ad

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನ 50 ಕೆಜಿ ವಿಭಾಗದ ಮಹಿಳೆಯರ ಕುಸ್ತಿ ಫೈನಲ್ ಸ್ಪರ್ಧೆಯಿಂದ ಕೆಲವೇ ಗ್ರಾಂ ತೂಕದ ಕಾರಣ ಅನರ್ಹಗೊಂಡಿರುವ ವಿನೇಶ್ ಫೋಗಟ್ (Vinesh Pogat) ಅವರಿಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಅಂತೆಯೇ ವಿನೇಶ್ (Vinesh Pogat) ಫೈನಲ್‌ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು ಕಸಿದುಕೊಳ್ಳಲಾಗಿದೆ ಎಂದು ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Join Our Telegram: https://t.me/dcgkannada

ಈ ಕುರಿತು ಟ್ವಿಟ್ ಮಾಡಿರುವ ಅವರು, ವಿನೇಶ್ (Vinesh Pogat) ಫೈನಲ್‌ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಾಮರ್ಥ್ಯ ವರ್ಧನೆಯ ಔಷಧಿಗಳ ಬಳಕೆಯಂತಹ ದುಷ್ಕೃತ್ಯಗಳಾಗಿದ್ದರೆ ಅನರ್ಹತೆ ಅರ್ಥಪೂರ್ಣವಾಗುತ್ತಿತ್ತು. ವಿನೇಶ್‌ಗೆ ಅರ್ಹ ಮನ್ನಣೆ ಸಿಗುತ್ತದೆ.

ಪ್ರತಿಯೊಂದು ಕ್ರೀಡೆಗೂ ನಿಯಮಗಳಿವೆ. ಆ ನಿಯಮಗಳನ್ನು ಸಂದರ್ಭಕ್ಕೆ ಅನುಗುಣವಾಗಿ ನೋಡಬೇಕು. ನಿಯಮಗಳನ್ನು ಕಾಲಕಾಲಕ್ಕೆ ಮರುಪರಿಶೀಲಿಸಬಹುದು.

ವಿನೇಶ್ ಫೋಗಟ್ ಫೈನಲ್‌ಗೆ ಅರ್ಹತೆ ಪಡೆದಿದ್ದರು. ಬಳಿಕ ಹೆಚ್ಚು ತೂಕದ ಆಧಾರದ ಮೇಲೆ ಅವರನ್ನು ಅನರ್ಹಗೊಳಿಸಲಾಯಿತು. ಅವರಿಂದ ಬೆಳ್ಳಿ ಪದಕವನ್ನು ಕಸಿದುಕೊಳ್ಳುವುದು ಕ್ರೀಡಾ ಪ್ರಜ್ಞೆಯನ್ನು ಉಲ್ಲಂಘನೆಯಾಗಿದೆ.

ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಔಷಧಿಗಳ ಬಳಕೆಯಂತಹ ನೈತಿಕತೆಯ ಉಲ್ಲಂಘನೆಗಳಿಗಾಗಿ ಕ್ರೀಡಾಪಟುವನ್ನು ಅನರ್ಹಗೊಳಿಸಿದ್ದರೆ ಅದು ಅರ್ಥವಾಗುತ್ತಿತ್ತು. ಅಂತಹ ಸಂದರ್ಭದಲ್ಲಿ ಯಾವುದೇ ಪದಕ ನೀಡದಿರುವುದು ಮತ್ತು ಕೊನೆಯ ಸ್ಥಾನಕ್ಕೆ ಕೊಂಡೊಯ್ಯುವುದು ಸಮರ್ಥನೀಯ.

ಇದನ್ನೂ ಓದಿ: ನಾಗರ ಪಂಚಮಿಯಂದೇ ಹಾವು ಕಚ್ಚಿ ಬಾಣಂತಿ ದುರ್ಮರಣ!

ವಿನೇಶ್ ತನ್ನ ಎದುರಾಳಿಗಳನ್ನು ನ್ಯಾಯಯುತವಾಗಿ ಸೋಲಿಸಿ ಅಗ್ರ ಎರಡರೊಳಗಿನ ಸ್ಥಾನ ತಲುಪಿದರು. ಅವರು ಖಂಡಿತವಾಗಿಯೂ ಬೆಳ್ಳಿ ಪದಕಕ್ಕೆ ಅರ್ಹರು.

ನಾವೆಲ್ಲರೂ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ. ವಿನೇಶ್ ಅವರಿಗೆ ಅರ್ಹವಾದ ಮನ್ನಣೆ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ಪ್ರಾರ್ಥಿಸೋಣ ಎಂದು ಸುದೀರ್ಘವಾಗಿ ಬರೆದಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500