DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ (DKS vs HDK) ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ; ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿಕೆ ಶಿವಕುಮಾರ್ ಗೆ ತಿರುಗೇಟು (DKS vs HDK) ಕೊಟ್ಟರು.

Join Our Telegram: https://t.me/dcgkannada

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾದ ಘಟನೆ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.

ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.

ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Latest News

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು. ಮುದ್ದೇಬಿಹಾಳ ತಾಲ್ಲೂಕಿನ ಗೆದ್ದಲಮರಿಯ ರೈತ ಮಹದೇವಪ್ಪ ಕನ್ನೂರ ಅವರ ಹೊಲದಲ್ಲಿ ಅವರ ಸ್ನೇಹಿತರು, ಚರಗ ಚೆಲ್ಲಿದರು.ಪೊಲೀಸ್ ಇಲಾಖೆಯ ಪ್ರಕಾಶ ಪೂಜಾರಿ,

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ