Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ