Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

Ad
Ad


ನವದೆಹಲಿ: ಭಾರತಕ್ಕೆ ಅಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಉಬರ್ ಚಾಲಕನೊಬ್ಬ ಪಾಕಿಸ್ತಾನಿ ಪ್ರಯಾಣಿಕ ಹಾಗೂ ಆತನ ಭಾರತೀಯ ಸ್ನೇಹಿತೆಯನ್ನು ತಡರಾತ್ರಿ ಕ್ಯಾಬ್‌ನಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.

Ad
Ad

ಈ ಘಟನೆಯೂ ಆಗಸ್ಟ್ 10ರ ತಡರಾತ್ರಿ ನವದೆಹಲಿಯಲ್ಲಿ ನಡೆದಿದೆ. ಪಾಕಿಸ್ತಾನಿ ಪುರುಷ ಹಾಗೂ ಭಾರತೀಯ ಮಹಿಳೆಯನ್ನು ಕ್ಯಾಬ್‌ನ ಚಾಲಕ ನಡುರಸ್ತೆಯಲ್ಲಿ ಬಿಟ್ಟು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

Join Our Telegram: https://t.me/dcgkannada

ಕ್ಯಾಬ್ ಚಾಲಕ ಮಹಿಳೆಯನ್ನು ಮುಸ್ಲಿಂ ಎಂದು ಭಾವಿಸಿ, ಇದು ಹಿಂದೂಸ್ತಾನ್, ನಿಮ್ಮ ಪಾಕಿಸ್ತಾನವಲ್ಲ. ನೀವು ಹಲಾಲ್‌ನ ಸಂತತಿಗಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೆಲ್ಲವನ್ನು ರೆಕಾರ್ಡ್ ಮಾಡಿರುವ ಮಹಿಳೆ, “ಈ ವ್ಯಕ್ತಿ ರಾತ್ರಿ 12:30 ಕ್ಕೆ ನಮ್ಮನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ” ಎಂದು ತಿಳಿಸಿದ್ದಾರೆ.

ಮಹಿಳೆ ಹೇಳುವ ಪ್ರಕಾರ, ಆಕೆಯ ಸ್ನೇಹಿತ ಪಾಕಿಸ್ತಾನದಲ್ಲಿರುವ ತನ್ನ ಸಂಬಂಧಿಕರ ಬಗ್ಗೆ ಹಾಗೂ ತಾನು ದೆಹಲಿಗೆ ಬಂದಿರುವ ಬಗ್ಗೆ ಮಾತನಾಡುತ್ತಿದ್ದಾಗ ಕ್ಯಾಬ್ ಚಾಲಕ ತಪ್ಪಾಗಿ ಭಾವಿಸಿ ವಾಗ್ದಾಳಿಯನ್ನು ಪ್ರಾರಂಭಿಸಿದ್ದಾನೆ. ತಮ್ಮ ಮಾತುಗಳನ್ನು ನಿಯಂತ್ರಿಸಿ ಎಂದು ಕೇಳಿದರೂ ಕ್ಯಾಬ್‌ನಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ನೂರಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಭಾರತದ ಬಗ್ಗೆ ಅವಹೇಳನ ಮಾಡಿದ ಆರೋಪದ ಬಳಿಕ ಪ್ರಯಾಣಿಕರನ್ನು ಹೊರಹಾಕಿದ್ದಕ್ಕೆ ಹಲವು ಬಳಕೆದಾರರು ಉಬ‌ರ್ ಚಾಲಕನನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಚಾಲಕ ದುರ್ನಡತೆ ತೋರಿದ್ದಾನೆ. ಇಂತಹ ಚಾಲಕರನ್ನು ಕಂಪನಿ ಅಮಾನತು ಮಾಡಬೇಕೆಂದೂ ಆಗ್ರಹಿಸಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500