Accident news Accident board on road

Accident news: ಮೊನ್ನೆ ವಾಂತಿ.. ನಿನ್ನೆ ಮೂತ್ರದಿಂದ ತಪ್ಪಿತು ದುರಂತ!

Accident news: ಮೊನ್ನೆ ವಾಂತಿ.. ನಿನ್ನೆ ಮೂತ್ರದಿಂದ ತಪ್ಪಿತು ದುರಂತ!

ಚಾಮರಾಜನಗರ: ವಾಂತಿಯ ಕಾರಣ ಕಾರು ನಿಲ್ಲಿಸಿ ಕೆಳಕಿಳಿದಿದ್ದ ವೇಳೆ ಟ್ಯಾಂಕ್ ಕಾರಿನ ಮೇಲೆ ಉರುಳಿ (Accident news) ಅಪ್ಪಚ್ಚಿಯಾದ ವೇಳೆ ಐದು ಮಂದಿ ಪಾರಾಗಿದ್ದ ಬೆನ್ನಲ್ಲೇ, ಮೂತ್ರ ವಿಸರ್ಜನೆ ಕಾರಣ ದ್ವಿಚಕ್ರ ವಾಹನ ನಿಲ್ಲಿಸಿ, ತೆರಳಿದ್ದ ವೇಳೆ ಓರ್ವನ ಜೀವ ಉಳಿದಿರುವ ಘಟನೆ ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ಘಟನೆ ನಡೆದಿದೆ.

Join Our Telegram: https://t.me/dcgkannada

ಗುಂಡ್ಲುಪೇಟೆ ತಾಲೂಕಿನ‌ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಓರ್ವ (Accident news) ಮೃತಪಟ್ಟಿದ್ದಾನೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿ‌ನ 23 ವರ್ಷದ ಗಣೇಶ್ ಎಂಬಾತ ಮೃತಪಟ್ಟ ಬೈಕ್ ಸವಾರ. ಈತನ ಸ್ನೇಹಿತ ಅಪಘಾತದಿಂದ ಪಾರಾಗಿದ್ದಾನೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆಗೆಂದು ರಸ್ತೆ ಪಕ್ಕಕ್ಕೆ ತೆರಳಿದ್ದ. ಇದೇ ವೇಳೆ ಎದುರಿನಿಂದ ಬಂದ ಕೇರಳ ಮೂಲದ ಕಾರು ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ‌.

ಇದನ್ನೂ ಓದಿ: Raiachuru: ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟ‌ರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಬೈಕ್​ನಲ್ಲಿ ಕುಳಿತಿದ್ದ ಸವಾರ ಗಣೇಶ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ‌. ಮೂತ್ರ ವಿಸರ್ಜನೆಗೆ ತೆರಳಿದ್ದ ಈತನ ಸ್ನೇಹಿತ ಅವಘಡದಿಂದ ಪಾರಾಗಿದ್ದಾನೆ‌‌ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಕಾರು, ಬೈಕ್ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ