Suicide case Man committed suicide by pouring diesel on him self

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಂಚೋಳಿ: ತನ್ನ ‌ಮೈಮೇಲೆ ತಾನೇ ಡೀಸೆಲ್‌ ಅನ್ನು ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide case) ಶರಣಾಗಿರುವ ‌ಹೃದಯವಿದ್ರಾವಕ ದುರ್ಘಟನೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಹೌದು, ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ಸಂಭವಿಸಿದೆ ಎಂದು ಪಿ.ಎಸ್.ಐ.‌ಗಂಗಮ್ಮ ‌ಮಾಹಿತಿ ನೀಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಆತ್ಮಹತ್ಯೆಗೆ (Suicide case) ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಮಹೇಶ್ ಮಾರುತಿ ಹೆಂಡತಿಯ ತವರು ‌ಮನೆಯಲ್ಲಿ ಹೆಂಡತಿ ‌ಮಕ್ಕಳೊಂದಿಗೆ‌ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ (Suicide case) ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಚಿಂಚೋಳಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ಮೃತಪಟ್ಟ ಮಹೇಶ್, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Mudhol: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ