CM Siddaramaiah Muda case siddaramaiah prese meet

CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಬೆಂಗಳೂರು: ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ‌‌ ಎಂದು ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ‌ (CM Siddaramaiah) ಹೇಳಿದರು.

Join Our Telegram: https://t.me/dcgkannada

ಸಚಿವ ಸಂಪುಟದ‌ ಸಭೆಯ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂವಿಧಾನ ಬದ್ಧವಾಗಿ ನಡೆದುಕೊಂಡಿಲ್ಲ. ಆದ್ದರಿಂದ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮಯಿ ನೀಡಿರುವುದನ್ನು ಖಂಡಿಸಿ ಸಂಪುಟದಲ್ಲಿ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಅಸ್ಥಿತಗೊಳಿಸಲು ಮುಂದಾಗಿದೆ. ಇದರಿಂದ ಫೆಡರಲ್ ವ್ಯವಸ್ಥೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುವ ಮೂಲಕ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು.

ಇದನ್ನೂ ಓದಿ: SBI ಗ್ರಾಹಕರಿಗೆ BIG ALERT..!!

ರಾಜ್ಯಪಾಲರ ಆದೇಶದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಾಗುವುದು. ತಮ್ಮ ಮೇಲೆ ರಾಜಭವನ ಬಳಕೆ‌ ಸಲ್ಲ. ಬಡವರ ಪರ ಇರುವ ಸರ್ಕಾರ ಕೆಡವಲು ಈ ರೀತಿ ಮಾಡುತ್ತಿದ್ದಾರೆ ಎಂದು ಜರಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಇಕ್ಕಟಿಗೆ ಸಿಲುಕಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಲು ಸಚಿವರ ದಂಡು ಸಿದ್ದರಾಮಯ್ಯ‌ ಮನೆಗೆ ಆಗಮಿಸಿದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ