Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ದೊಡ್ಡಕಮ್ಮನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯ ಕೊಂದು ಶುಕ್ರವಾರ ಪರಾರಿ ಆಗಿದ್ದ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ (Suicide case) ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ದೊಡ್ಡಕಮ್ಮನಹಳ್ಳಿ ನಿವಾಸಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಮೀನಾ (36) ಮೇಲೆ ಕಬ್ಬಿಣ ಸಲಾಕೆಯಿಂದ ಹಲ್ಲೆ ನಡೆಸಿ ಶುಕ್ರವಾರ ಮಧ್ಯಾಹ್ನ ಕೊಂದು ಮಹೇಶ್ ಪರಾರಿಯಾಗಿದ್ದ. ಈ ಕುಕೃತ್ಯದ ಬಳಿಕ ಮನೆ ಸಮೀಪ ನಿರ್ಜನ ಪ್ರದೇಶಕ್ಕೆ ತೆರಳಿ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಮೀನಾ ಜತೆ ಮಹೇಶ್ 2ನೇ ವಿವಾಹವಾಗಿದ್ದ. ಇದಕ್ಕೂ ಮುನ್ನ ತನ್ನ ಮೊದಲ ಪತಿಯಿಂದ ಪ್ರತ್ಯೇಕವಾಗಿ ಇಬ್ಬರು ಮಕ್ಕಳ ಜತೆ ನಗರಕ್ಕೆ ಮೀನಾ ಬಂದಿದ್ದಳು. ಮೀನಾ ಮಕ್ಕಳ ಜತೆ ಮಹೇಶ್‌ ಅನ್ನೋನ್ಯವಾಗಿಯೇ ಇದ್ದ. ಆದರೆ, ಇತ್ತೀಚಿಗೆ ಪತ್ನಿ ನಡವಳಿಕೆ ಮೇಲೆ ಶಂಕೆಗೊಂಡಿದ್ದ ಆತ, ಸದಾ ಮೊಬೈಲ್‌ನಲ್ಲಿ ಮಾತುಕತೆಯಲ್ಲಿ ನಿರತಳಾಗಿದ್ದ ಮೀನಾ ವರ್ತನೆಗೆ ಆಕ್ಷೇಪಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಇದೇ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಸತಿ-ಪತಿ ಮಧ್ಯೆ ಜಗಳವೂ ಆಗಿದೆ. ಆಗ ಪತ್ನಿಯನ್ನು ಹತ್ಯೆ ಮಾಡಿದ್ದ ಪತಿರಾಯ, ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ (Suicide case) ಶರಣಾಗಿದ್ದಾನೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ