V. Somanna: 'If Siddu continues as CM..', the Union Minister created a political stir

V. Somanna: ‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ..

V. Somanna: ‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ..

Ad
Ad

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

Ad
Ad

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದು ಸೋಮಣ್ಣ (V. Somanna) ಹೇಳಿದರು.

Join Our Telegram: https://t.me/dcgkannada

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಮುಡಾ ಹಗರಣ (Muda case) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದನ್ನೂ ಓದಿ: Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500