Guarantee schemes CM Siddaramaiah guarantee for guarantee schemes

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಬೆಂಗಳೂರು: ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು,‌ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆ​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಏತನ್ಮಧ್ಯೆ, ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಳ್ಳಲು ಸಿದ್ಧರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Join Our telegram: https://t.me/dcgkannada

ಸಿದ್ದರಾಮಯ್ಯ‌ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ, ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ.

ನಾಳೆ(ಆಗಸ್ಟ್​ 19) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ತಮ್ಮ ವಿರುದ್ಧ ಬಂದಿರುವ ಆರೋಪದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ