Death news: Progressive thinker Prof. Mahesh Chandraguru is no more

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ.

ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ ಅವರನ್ನು‌ ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರು (Death News) ಎಳೆದಿದ್ದಾರೆ.

Join Our Telegram: https://t.me/dcgkannada

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ಮಹೇಶ್ ಚಂದ್ರಗುರು 80ರ ದಶಕದಲ್ಲಿ ಹೈದರಾಬಾದ್​​ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಳಿಕ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು.

ಪ್ರೊ.ಮಹೇಶ್‌ ಚಂದ್ರ ಗುರು ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.

ಇದನ್ನೂ ಓದಿ: Shocking Video: ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ