ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ