HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ? ಬಿಜೆಪಿಯವರು ನಡೆದುಕೊಂಡ ರೀತಿ ನನ್ನ ಮನಸ್ಸಿಗೆ ನೋವಾಗಿದೆ.

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನ ಮಾಡಿದ್ದಾರೆ? ಯಾರು ಈ ಪ್ರೀತಂಗೌಡ? ದೇವೇಗೌಡರ ಕುಟುಂಬವನ್ನ ಸರ್ವನಾಶ ಮಾಡಲು ಹೊರಟಿದ್ದವ. ಅವನನ್ನು ಸಭೆಗೆ ಕರಿತಾರೆ, ಅದಕ್ಕೆ ನನ್ನನ್ನೂ ಕರೀತಾರೆ, ನನಗೂ ಸಹಿಸೋಕೆ ಇತಿ ಮಿತಿ ಇದೆ ಎಂದು ಮಿತ್ರ ಪಕ್ಷ ಬಿಜೆಪಿಯ ಮುಖಂಡರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಪೆನ್‌ಡ್ರೈವ್‌ ಬೀದೀಲಿ ಹಂಚೋಕೆ ಯಾರು ಕಾರಣ ಎಂದು ಬಿಜೆಪಿಗರಿಗೆ ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನನ್ನ ಕುಟುಂಬಕ್ಕೆ ವಿಷ ಹಾಕಿದವರನ್ನ ನನ್ನ ಜೊತೇಲಿ ಕೂರಿಸ್ತಾರೆ. ಈಗ ಪಾದಯಾತ್ರೆಗೆ ನಮ್ಮ ಬೆಂಬಲ ಕೇಳ್ತಾರಾ? ಎಂದು ಹರಿಹಾಯ್ದರು.

ಯಾವುದೋ ಒಂದು ಪ್ರಕರಣ ಇಟ್ಕೊಂಡು ಪಾದಯಾತ್ರೆ ಮಾಡೋದು ಎಷ್ಚು ಸರಿ? ಜನರ ಭಾವನೆ, ನೋವಿಗೆ ಸ್ಪಂದಿಸಬೇಕಾಗಿದೆ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಬಿಜೆಪಿ ಆಯೋಜಿಸಿರುವ ಪಾದಯಾತ್ರೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಮತ್ತೊಂದೆಡೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಪಾದಯಾತ್ರೆಗೆ ಅಪಸ್ವರ ತೆಗೆದಿದ್ದು, ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಪ್ರರ್ಯಾಯ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದ್ದು, ಕೂಡಲಸಂಗಮ ಅಥವಾ ಹುಬ್ಬಳ್ಳಿಯಿಂದ ಬಳ್ಳಾರಿಯವರೆಗೆ ಹೆಜ್ಜೆ ಹಾಕಲು ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೆ, ವಿಜಯೇಂದ್ರ ಅವರು ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಭೇಟಿ ಕುರಿತು ಟ್ವಿಟ್ ಮಾಡಿರುವ ವಿಜಯೇಂದ್ರ, ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು.

ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದು, ಕುಮಾರಸ್ವಾಮಿ ಮುನಿಸು, ಯತ್ನಾಳ್ ಇಕ್ಕಟ್ಟಿನ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ