Devaraju Arasu: Pious Arasu who gave land to the poor - Tehsildar Ningappa

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

Ad
Ad

ಹುನಗುಂದ: ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು (Devaraju Arasu) ಅವರು ಎಂದು ತಹಶಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

Ad
Ad

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ (Devaraju Arasu) ಹಾಗೂ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆ ಮಾಡಿ ನಂತರ ಮಾತನಾಡಿದರು.

8 ವರ್ಷ ಕಾಲ ಮುಖ್ಯಮಂತ್ರಿಯಾಗಿ ಜನ ಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು. ಭೂ ಸುಧಾರಣೆ ಕಾನೂನು ಜಾರಿಗೆ ತಂದು ರೈತರಿಗೆ ಉಳುವವನೆ ಭೂ ಒಡೆಯ ಪಟ್ಟವನ್ನು ಒದಗಿಸಿಕೊಟ್ಟರು. ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ರಾಜ್ಯದ ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಿಸಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ: ವೀರಭದ್ರೇಶ್ವರ ಜಾತ್ರೆ : ದೇವರ ಮೂರ್ತಿಗಳ ಅದ್ದೂರಿ ಮೆರವಣಿಗೆ VIDEO

ಶ್ರೀ ನಾರಾಯಣ ಗುರುಗಳು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಕೇರಳದ ಜಾತಿ-ಮುಕ್ತ ಸಂಸ್ಕೃತಿಯಲ್ಲಿ ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಬೆಳೆಸಲು, ಅವರು ಅನ್ಯಾಯದ ವಿರುದ್ಧ ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿದರು.

ಹಿಂದೂಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇದೇ ಸಮಯದಲ್ಲಿ ಸನ್ಮಾನಿಸಿದರು.

ಶಿಕ್ಷಕಿ ಮುರ್ತುಜಾಬೇಗಂ ಕೊಡಗಲಿ, ಉಪನ್ಯಾಸ ನೀಡಿದರು.

ಭೂ ನ್ಯಾಯ ಮಂಡಳಿತ ಸದಸ್ಯ ಅಮರೇಶ ನಾಗೂರ, ತಾಲೂಕು ಹಿಂದೂಳಿದ ಕಲ್ಯಾಣಾಧಿಕಾರಿ ಸಂಗಮೇಶ ಗಡೇದ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಗುಡಗುಂಟಿ, ಅರಣ್ಯಾಧಿಕಾರಿ ಪಿ.ಎಂ. ಪುರಾಣ ಕಮಠ, ಗ್ರೇಡ್ ೨ ತಹಸೀಲ್ದಾರ ಮಹೇಶ ಸಂದಿಗವಾಡ, ಶಿರಸ್ಥೆದಾರ ಎಚ್.ಎಂ.ಶಿವಣಗಿ, ಶ್ರವಣ ಮುಂಡೇವಾಡಿ,, ಕಂದಾಯ ನಿರೀಕ್ಷಕ ಲಿಂಗರಾಜ ಹುನಗುಂಡಿ, ವಿನೋಕುಮಾರ ಭೋವಿ, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500