Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ