IMD Rain alert

Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

Ad
Ad

ಬೆಂಗಳೂರು: ತುಮಕೂರು, ಬಳ್ಳಾರಿ ಸೇರಿ ರಾಜ್ಯದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ (Rain update) ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆವರೆಗೆ ಭರ್ಜರಿಯಾಗಿ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲಾಂಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

Ad
Ad

ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯ ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ವರದಿಯಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸುಮಾರು 60 ಮನೆ, 40ಕ್ಕೂ ಅಧಿಕ ಅಂಗಡಿಗಳಿಗೆ ನೀರುನುಗ್ಗಿದೆ. ಕೊರಟಗೆರೆ ಯಲ್ಲಿ ಕೇವಲ 2 ಗಂಟೆ ಅವಧಿಯಲ್ಲಿ 637ಮೀ.ಮೀ ಮಳೆಬಿದ್ದಿದೆ ಎಂದು ತಿಳಿದು ಬಂದಿದೆ.

Join Our Telegram: https://t.me/dcgkannada

ಇನ್ನು, ಬಳ್ಳಾರಿಯಲ್ಲಿ ಭಾರೀ ಮಳೆಗೆ 9 ಸಂಪರ್ಕ ಸೇತುವೆಗಳು ಮುಳು ಗಿದ್ದು, ಆಂಧ್ರಪ್ರದೇಶ ಸಂಪರ್ಕಿಸುವ ಸೇತುವೆ ಮೇಲೂ ನೀರು ಹರಿದು ಕೆಲಕಾಲ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲೆಯಲ್ಲಿ 5 ವಿದ್ಯುತ್ ಟ್ರಾನ್ಸ್‌ಫಾರ್ಮರ್, 51 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹೊಲಗದ್ದೆಗಳಿಗೂ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯ ಹಂಪಿ ಬಳಿಯ ಕಮಲಾಪುರ ಕೆರೆ ಕೋಡಿಬಿದ್ದು ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಧವಸ ಧಾನ್ಯಗಳು ಹಾಳಾಗಿವೆ ಎನ್ನಲಾಗಿದೆ.

23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ:

ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗ ಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. (Rain update)

ಅದೇ ರೀತಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಗುರುವಾರದಿಂದ ಉತ್ತರ ಒಳನಾಡು ಭಾಗದ ಜಿಲ್ಲೆಗಳು, ಶುಕ್ರವಾರದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500