Viral news: A one-year-old baby was bitten by a snake in Bihar

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Ad
Ad

ಬಿಹಾರ: ಇದೊಂದು ವಿಚಿತ್ರವಾದ ಅಪರೂಪ ಘಟನೆ. ಒಂದು ವರ್ಷದ ಮಗು ಒಂದು ಆಟವಾಡುತ್ತಿದ್ದಾಗ, ತನ್ನ ಬಾಯಲ್ಲಿ ಹಾವಿನ ಮರಿಯನ್ನು ಜಗಿದು ಕೊಂದಿದೆ! (Viral news)

Ad
Ad

ಹೌದು, ಹಾವಿನ ಮರಿಯನ್ನು ಮಗು ಜಗಿಯುತ್ತಿರುವುದನ್ನು ಕಂಡ ಮಗುವಿನ ತಾಯಿ ಕೂಡಲೇ ಮಗುವಿನ ಬಾಯಲ್ಲಿದ್ದ ಹಾವನ್ನು ಹೊರತೆಗೆದು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿ ಭಯಪಡುವ ಅಗತ್ಯವಿಲ್ಲ, ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Join Our Telegram: https://t.me/dcgkannada

ಅದನ್ನು ನಂಬಲು ಕುಟುಂಬದವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಗುವನ್ನು ಪುನಃ ಪರೀಕ್ಷಿಸುವಂತೆ ವೈದ್ಯರಿಗೆ ಮತ್ತೆ ಕೇಳಿಕೊಂಡರು. ಗಾಯವನ್ನು ನೋಡಿದ ವೈದ್ಯರು, ಈ ಗಾಯವು ವಿಷಕಾರಿಯಲ್ಲ ಎಂದು ಹೇಳಿದ್ದಾರೆ‌.

ಈ ಘಟನೆಯು ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ಮನೆಯ ಟೆರೇಸ್ ಮೇಲೆ ಸಂಭವಿಸಿದೆ. ಮನೆಯ ಟೆರೇಸ್ ಮೇಲೆ ಹಾವು ಹರಿದಾಡುತ್ತಾ, ಮಗು ಇದ್ದ ಕಡೆ ಬಂದಿದೆ. ಈ ವೇಳೆ ಮಗು ಮರಿ ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದೆ. ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದೆ. ಮಗು ಜಗಿದಿದ್ದರಿಂದ ಹಾವಿನ ಮರಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ. (Viral news)

ಇನ್ನು, ಹಾವನ್ನು ಕಚ್ಚಿದ ಬಾಲಕ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದ ನಿವಾಸಿ ರಾಕೇಶ್ ಕುಮಾರ್ ಅವರ 1 ವರ್ಷದ ಮಗು ರಿಯಾನ್ಸ್ ಕುಮಾರ್ ಎಂದು ಗುರುತಿಸಲಾಗಿದೆ. ಈಗ ಮಗು ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇದನ್ನು ‌ಓದಿ: Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500